×
Ad

ಪುತ್ತೂರು: ಮನೆಯಿಂದ ಚಿನ್ನಾಭರಣ ಕಳವು

Update: 2016-08-29 19:32 IST

ಪುತ್ತೂರು, ಆ.29: ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಸುಮಾರು 23 ಸಾವಿರ ರೂ. ವೌಲ್ಯದ ಚಿನ್ನಾಭರಣ ಕಳವು ನಡೆಸಿದ ಘಟನೆ ಪುತ್ತೂರು ನಗರದ ಕೊಂಬೆಟ್ಟು ಎಂಬಲ್ಲಿ ನಡೆದಿದೆ.

ಕೊಂಬೆಟ್ಟು ನಿವಾಸಿ ವಿವೇಕ್ ಶೆಣೈ ಎಂಬವರ ಮನೆಯಲ್ಲಿ ಕಳವು ಪ್ರಕರಣ ನಡೆದಿದ್ದು, ವಿವೇಕ್ ಶೆಣೈ ಅವರ ಕುಟುಂಬ ಕಾಸರಗೋಡಿನಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದಾಗ ಘಟನೆ ಸಂಭವಿಸಿದೆ. ಮನೆಯ ಎದುರು ಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ 2 ಚಿನ್ನದ ಬಳೆ ಮತ್ತು ಒಂದು ಉಂಗುರವನ್ನು ಕಳವುಗೈದಿದ್ದಾರೆ. ಮನೆ ಮಂದಿ ಕಾಸರಗೋಡಿನಿಂದ ಹಿಂದಿರುಗಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. 

ಸ್ಥಳಕ್ಕೆ ಎಎಸ್ಪಿ ರಿಷ್ಯಂತ್ ಸಿ.ಬಿ., ನಗರ ಠಾಣಾ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್, ಎಸ್ಸೈ ವೆಂಕಟೇಶ್ ಭಟ್ ಆಗಮಿಸಿ ಪರಿಶೀಲನೆ ನಡೆಸಿದರು. ಬೆರಳಚ್ಚು ತಜ್ಞರು ಮತ್ತು ಶ್ವಾನದಳವನ್ನು ಕರೆಸಿಕೊಳ್ಳಲಾಯಿತು. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News