ಮಹಾದಾಯಿ ನ್ಯಾಯಾಧೀಕರಣ ಮಧ್ಯಾಂತರ ತೀರ್ಪು : ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ ರಾಜ್ಯ ಸರಕಾರ

Update: 2016-08-29 15:12 GMT

ಬೆಂಗಳೂರು, ಆ.29: ಮಹಾದಾಯಿ ನ್ಯಾಯಾಧೀಕರಣವು ನೀಡಿರುವ ಮಧ್ಯಾಂತರ ತೀರ್ಪಿನ ವಿರುದ್ಧ ರಾಜ್ಯ ಸರಕಾರವು ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.
  
ರಾಜ್ಯ ಸರಕಾರದ ಪರ ವಕೀಲ ನಿಶಾಂತ್ ಪಾಟೀಲ್ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಮಹಾದಾಯಿ ನದಿಯಿಂದ 7.56 ಟಿಎಂಸಿ ನೀರು ಕುಡಿಯುವ ಉದ್ದೇಶಕ್ಕೆ ಬಳಕೆ ಮಾಡಲು ಅನುಮತಿ ಕೋರಿ ರಾಜ್ಯ ಸರಕಾರ ಸಲ್ಲಿಸಿದ್ದ ಮಧ್ಯಾಂತರ ಅರ್ಜಿಯನ್ನು ಜು.27ರಂದು ನ್ಯಾಯಾಧೀಕರಣವು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸದನ ನಾಯಕರು ಹಾಗೂ ಸರ್ವಪಕ್ಷಗಳ ಮುಖಂಡರ ಸಭೆಯಲ್ಲಿ ನ್ಯಾಯಾಧೀಕರಣದ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ನಿರ್ಧಾರ ಕೈಗೊಳ್ಳಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News