ಭಡ್ತಿ ಶಿಕ್ಷಕರ ವರ್ಗಾವಣೆ ಸಲ್ಲದು: ಡಿ.ಗಣಪತಪ್ಪ
ಸಾಗರ, ಆ.30: ಸರಕಾರ ಮರು ನಿಯೋಜನೆ ಹೆಸರಿನಲ್ಲಿ ಭಡ್ತಿ ಮುಖ್ಯ ಶಿಕ್ಷಕರನ್ನು ವರ್ಗಾವಣೆ ಮಾಡುತ್ತಿರುವುದರಿಂದ ಅನೇಕ ಶಾಲೆಗಳಲ್ಲಿ ಶೈಕ್ಷಣಿಕ ವಾತಾವರಣದ ಮೇಲೆ ದುಷ್ಪರಿಣಾಮ ಬೀರಿದೆ ಎಂದು ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಿ.ಗಣಪತಪ್ಪಹೇಳಿದರು.
ಇಲ್ಲಿನ ಗುರುಭವನದಲ್ಲಿ ಸೋಮವಾರ ತಾಲೂಕು ಭಡ್ತಿ ಮುಖ್ಯ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ನಗರ ಹಾಗೂ ಗ್ರಾಮಾಂತರ ಪ್ರದೇಶದ ಸರಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆಯನ್ನು ಆಧಾರವಾಗಿ ಇರಿಸಿಕೊಂಡು ಭಡ್ತಿ ಮುಖ್ಯ ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದೆ. ಶಾಲೆಯ ಆಡಳಿತ ನಿರ್ವಹಣೆ ಮಾಡುತ್ತಿದ್ದ ಮುಖ್ಯಸ್ಥರನ್ನು ಏಕಾಏಕಿ ವರ್ಗಾವಣೆ ಮಾಡುವ ಮೊದಲು ಹಿರಿಯ ಅಧಿಕಾರಿಗಳು ಸ್ಥಳೀಯವಾಗಿ ಆಗುವ ಸಮಸ್ಯೆಗಳ ಬಗ್ಗೆ ಸಹ ಗಮನ ಹರಿಸುವ ಅಗತ್ಯವಿದೆ ಎಂದು ಹೇಳಿದರು. ಭಡ್ತಿ ಮುಖ್ಯ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ವಿ.ಟಿ. ಸ್ವಾಮಿ ಮಾತನಾಡಿ, ಶಾಲೆಯ ಆಡಳಿತ ನಿರ್ವಹಣೆ ಜೊತೆಗೆ ಪಾಠ ಪ್ರವಚನದಲ್ಲಿ ತೊಡಗಿಕೊಳ್ಳುವ ಭಡ್ತಿ ಮುಖ್ಯ ಶಿಕ್ಷಕರನ್ನು ಸಂಘಟಿಸುವುದು ಹಾಗೂ ಅವರ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಪರಿಹಾರ ಕಲ್ಪಿಸುವ ಕೆಲಸವನ್ನು ಸಂಘವು ಮುಂದಿನ ದಿನಗಳ
ಲ್ಲಿ ಪರಿಣಾಮಕಾರಿಯಾಗಿ ಮಾಡಲಿದೆ ಎಂದು ಹೇಳಿದರು. ಭಡ್ತಿ ಮ ುಖ್ಯ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಬಿ.ಟಿ.ಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ಎನ್.ಗಾವಡಿ, ಪ್ರಾಥಮಿಕ ಶಾಲಾ ಶಿಕ್ಷಕರ
ಸಂಘದ ಪ್ರಧಾನ ಕಾರ್ಯದರ್ಶಿ ಮನು ಡಿ., ಒ.ಕೆ. ಶಿವಪ್ಪ, ಶಿಕ್ಷಣ ಸಂಯೋಜಕ ರವೀಂದ್ರ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಉಮೇಶ್ ಹಿರೇನೆಲ್ಲೂರು ಮತ್ತಿತರರು ಉಪಸ್ಥಿತರಿದ್ದರು.