ಮೂಡುಶೆಡ್ಡೆ: ಗಾಂಜಾ ಸೇವಿಸುತ್ತಿದ್ದ ಯುವಕನ ಬಂಧನ
Update: 2016-08-30 23:12 IST
ಮಂಗಳೂರು, ಆ.30: ಮೂಡುಶೆಡ್ಡೆ ಎದುರು ಪದವು ಮಸೀದಿ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಯುವಕನನ್ನು ಕಾವೂರು ಪೊಲೀಸರು ಇಂದು ಬಂಧಿಸಿದ್ದಾರೆ.
ಬಂಧಿತನನ್ನು ಮೂಡುಶೆಡ್ಡೆ ನಿವಾಸಿ ಲಿಯೊನೊ ರಿಚರ್ಡ್ ಬಾಬು (20) ಎಂದು ಗುರುತಿಸಲಾಗಿದೆ.
ಅನುಮಾನಾಸ್ಪದ ರೀತಿಯಲ್ಲಿ ನಿಂತಿಕೊಂಡಿದ್ದ ಈತನನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವ ಅನುಮಾನ ಬಂದಿದೆ. ಆತನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.