ಎಸ್‌ಡಿಪಿಐ ಚುನಾಯಿತ ಜನ ಪ್ರತಿನಿಧಿಗಳ ಕಾರ್ಯಾಗಾರ

Update: 2016-08-31 04:32 GMT

ಮಂಗಳೂರು, ಆ.31: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ದಕ್ಷಿಣ ಕನ್ನಡ ವ್ಯಾಪ್ತಿಯ ಚುನಾಯಿತ ಜನಪ್ರತಿನಿಧಿಗಳ ಕಾರ್ಯಾಗಾರವು ಗೂಡಿನಬಳಿ ಸಮುದಾಯ ಭವನದಲ್ಲಿ ನಡೆಯಿತು.
 ಕಾರ್ಯಾಗಾರವನ್ನು ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಎಸ್‌ಡಿಪಿಐ ಬಡವರ ಪಕ್ಷ. ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ಮತ್ತು ಹಕ್ಕು ಸಿಗುವಂತಹ ಕಲ್ಯಾಣ ರಾಜ್ಯದ ಪರಿಕಲ್ಪನೆಯೊಂದಿಗೆ ಈ ಪಕ್ಷ ಜನ್ಮ ತಾಳಿದೆ. ಆದುದರಿಂದ ಪಕ್ಷದ ಚುನಾಯಿತ ಜನಪ್ರತಿನಿಧಿಗಳು ತಮ್ಮ ತಮ್ಮ ಪ್ರದೇಶಗಳಲ್ಲಿ ಎಲ್ಲರೊಂದಿಗೆ ಬೆರೆತು ಅಭಿವೃದ್ಧಿ ಕಾರ್ಯಗಳಲ್ಲಿ ಹೆಚ್ಚುಹೆಚ್ಚು ತೊಡಗಿಸಿಕೊಂಡು ಪಕ್ಷದ ಗುರಿಯನ್ನು ಈಡೇರಿಸಲು ಶ್ರಮಿಸಬೇಕು ಎಂದರು.

 ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ದಸಂಸ ರಾಜ್ಯ ಮಾಜಿ ಕೋಶಾಧಿಕಾರಿ, ಚಿಂತಕ ಹೆಬ್ಬಾಳ ಲಿಂಗರಾಜು ಕಾರ್ಯಾಗಾರ ನಡೆಸಿಕೊಟ್ಟರು. ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೊಡಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಯಾಗಿದ್ದ ಎಸ್‌ಡಿಪಿಐ ರಾಜ್ಯ ಪ್ರ.ಕಾರ್ಯದರ್ಶಿ ಅಬ್ದುಲ್ಲತೀಫ್ ಕೆ. ಮಾತನಾಡಿದರು.
ಪಕ್ಷದ ರಾಜ್ಯ ಸಮಿತಿ ಸದಸ್ಯ ಅಬ್ರಾರ್ ಅಹ್ಮದ್, ಜಿಲ್ಲಾ ಉಪಾಧ್ಯಕ್ಷ ಅಥಾವುಲ್ಲ ಜೋಕಟ್ಟೆ, ಬಂಟ್ವಾಳ ವಿಧಾನಸಭಾ ಸಮಿತಿಯ ಅಧ್ಯಕ್ಷ ಶಾಹುಲ್ ಎಸ್.ಎಚ್. ಉಪಸ್ಥಿತರಿದ್ದರು.
ಜಿಲ್ಲಾ ಕೋಶಾಧಿಕಾರಿ ಇಕ್ಬಾಲ್ ಐ.ಎಂ.ಆರ್. ಸ್ವಾಗತಿಸಿದರು. ಜಿಲ್ಲಾ ಪ್ರ.ಕಾರ್ಯದರ್ಶಿ ನವಾಝ್ ಉಳ್ಳಾಲ ವಂದಿಸಿದರು. ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News