ಕಲ್ಲಡ್ಕದಲ್ಲಿ ರಸ್ತೆ ಅಪಘಾತ: ಐವರಿಗೆ ಗಾಯ
Update: 2016-08-31 16:12 IST
ಟ್ವಾಳ, ಆ.31: ಕಲ್ಲಡ್ಕ ಸಮೀಪದ ದಾಸರಕೋಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಕಲ್ಲಡ್ಕದಿಂದ ಮಾಣಿ ಕಡೆಗೆ ತೆರಳುತ್ತಿದ್ದ ಇಂಡಿಕಾ ಕಾರು ಮತ್ತು ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಐವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಗಾಯಾಳುಗಳ ಕುರಿತ ಹೆಚ್ಚಿನ ವಿವರ ತಿಳಿದುಬಂದಿಲ್ಲ. ಎಲ್ಲ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.