ಕೋಡಿ: ಬ್ಯಾರೀಸ್ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Update: 2016-08-31 12:42 GMT

ಕುಂದಾಪುರ, ಆ.31: ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕೋಡಿಯ ಬ್ಯಾರೀಸ್ ಪಿಯು ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟವನ್ನು ಉದ್ಯಮಿ ಆನಂದ ಸಿ. ಕುಂದರ್ ಉದ್ಘಾಟಿಸಿದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಜಿ ಮಾಸ್ಟರ್ ಮೆಹಮೂದ್ ಶುಭಹಾರೈಸಿದರು.

ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳಾದ ರಫೀಕ್ ಕೋಡಿ, ಮುಸ್ತರಿನ್ ಅಬುಶೇಖ್, ಅಬ್ದುಲ್ ಕೋಟೆ, ಯೂಸುಫ್, ಕರುಣಾಕರ ಶೆಟ್ಟಿ ಕೋಟೇಶ್ವರ, ನಾಗರಾಜ ಶೆಟ್ಟಿ, ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಣ ಶಿಕ್ಷಕ ಪ್ರೀತೇಶ್ ಶೆಟ್ಟಿ, ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಇಲಿಯಾಸ್, ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಪ್ ಸನ್ನಿ ಡಿಸೋಜ, ಬ್ಯಾರೀಸ್ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಶಮೀರ್ ಸ್ವಾಗತಿಸಿದರು. ಹಾಜಿ.ಕೆ.ಮೊಹಿದ್ದೀನ್ ಬ್ಯಾರಿ ಅನುದಾನಿತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಜಯಂತಿ ವಂದಿಸಿದರು. ಪ್ರಕಾಶ ಶೆಟ್ಟಿ ಬೇಳ್‌ಗೋಡು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News