ನಿಧನ
Update: 2016-08-31 23:54 IST
ವಿಶ್ವನಾಥ ರೈ
ಕಾಸರಗೋಡು, ಆ.31: ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ಎಂ.ವಿಶ್ವನಾಥ ರೈ ಮಾಯಿಪ್ಪಾಡಿ (65) ಬುಧವಾರ ಮಧ್ಯಾಹ್ನ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಎದೆ ನೋವು ಕಾಣಿಸಿಕೊಂಡ ಅವರನ್ನು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ವಿಶ್ವನಾಥ ರೈ ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇಗುಲದ ಜೀರ್ಣೋದ್ಧಾರ ಸಮಿತಿ ಕಾರ್ಯ ದರ್ಶಿಯಾಗಿದ್ದರು. ನೀರ್ಚಾಲು, ಬಂದಡ್ಕ, ಮಾಯಿಪ್ಪಾಡಿ ಶಾಲೆಗಳಲ್ಲಿ ಅಧ್ಯಾಪಕರಾಗಿ, ಕುಂಬಳೆ ಸರಕಾರೀ ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.