×
Ad

ನಿರ್ಮಾಣ ಹಂತದ ಕಟ್ಟಡ ಕುಸಿತ: ಪಕ್ಕದ 5 ಕಟ್ಟಡದಲ್ಲಿ ಬಿರುಕು

Update: 2016-09-01 12:31 IST

ಬೆಂಗಳೂರು, ಸೆ.1: ಇಲ್ಲಿನ ಪುಲಿಕೇಶಿ ನಗರದ ಕೋಲ್ಸ್‌ಪಾರ್ಕ್ ಸಮೀಪ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಕುಸಿದು ಬಿದ್ದಿದ್ದು, ಪರಿಣಾಮ ಕಟ್ಟಡಕ್ಕೆ ತಾಗಿಕೊಂಡಿದ್ದ 5 ಕಟ್ಟಡಗಳು ಬಿರುಕು ಬಿಟ್ಟಿರುವ ಘಟನೆ ಬುಧವಾರ ನಡೆದಿದೆ.

ಪ್ರೆಸ್ಟೀಜ್ ಗ್ರೂಪ್ ಕಟ್ಟಡ ನಿರ್ಮಾಣ ಕಾರ್ಯ ನಡೆಸುತ್ತಿತ್ತು. ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದ ಕಾರಣ ಹತ್ತಿರದ 5 ಕಟ್ಟಡಗಳ ಒಂದು ಭಾಗ ಕುಸಿದು ಬಿದ್ದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಕಟ್ಟಡದಲ್ಲಿದ್ದ 10ಕ್ಕೂ ಅಧಿಕ ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಗೊಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News