×
Ad

ಆರೆಸ್ಸೆಸ್, ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಭಯೋತ್ಪಾದನೆ: ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಧನಂಜಯ್

Update: 2016-09-01 13:04 IST

ಬೆಂಗಳೂರು, ಸೆ.1: ಆರೆಸ್ಸೆಸ್ ಮತ್ತು ಬಿಜೆಪಿ ಬೆಂಬಲಿತ ಸಂಘಟನೆಗಳು ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿವೆ. ಇಂತಹ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಧನಂಜಯ್ ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜರಂಗ ದಳ, ಎಬಿವಿಪಿ ಮತ್ತು ಗೋರಕ್ಷಕದಳ ಮುಂತಾದ ಸಂಘಟನೆಗಳು ಭಯೋತ್ಪಾದನಾ ಚಟುವಟಿಕೆಗಳನ್ನು ಮಾಡುತ್ತಿವೆ. ಎಬಿವಿಪಿ ನಕಲಿ ವಿದ್ಯಾರ್ಥಿಗಳನ್ನು ಬಳಸಿಕೊಂಡು ಸಮಾಜದ್ರೋಹಿ ಕೆಲಸದಲ್ಲಿ ತೊಡಗಿವೆ.

ಗೋರಕ್ಷಣೆಯ ಹೆಸರಿನಲ್ಲಿ ದಲಿತರಿಗೆ ತೊಂದರೆ ನೀಡಲಾಗುತ್ತಿದೆ ಎಂದು ಪ್ರಧಾನಮಂತ್ರಿಗಳೇ ಹೇಳಿದ್ದಾರೆ. ಎಬಿವಿಪಿ ಮತ್ತು ಬಜರಂಗದಳ ಸಂಘಟನೆಗಳ ವಿರುದ್ಧ ಹಲವಾರು ಕಡೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಪೋಟಾ ಕಾಯ್ದೆಯಡಿ ಈ ಸಂಘಟನೆಗಳನ್ನು ನಿಷೇಧಿಸಬೇಕು. ಇಲ್ಲದಿದ್ದಲ್ಲಿ ರಾಷ್ಟ್ರಾದ್ಯಂತ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News