×
Ad

ಅಪೌಷ್ಟಿಕತೆ ನಿವಾರಣೆಗೆ ಕೆಜೋಡಿಸಿ: ನ್ಯಾ. ಮಹಾಸ್ವಾಮೀಜಿ

Update: 2016-09-01 21:53 IST

ಮಡಿಕೇರಿ ಸೆ.1 : ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಸರಕಾರ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಂಡು ಅಪೌಷ್ಟಿಕತೆ ಯನ್ನು ಸಂಪೂರ್ಣವಾಗಿ ನಿವಾರಣೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸುವಂತಾಗಬೇಕು ಎಂದು ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಆರ್.ಕೆ.ಜಿ. ಎಂ.ಎಂ.ಮಹಾಸ್ವಾಮೀಜಿ ಕರೆ ನೀಡಿದ್ದಾರೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹಕ್ಕೆ ಚಾಲನೆ ನೀಡಿ ನ್ಯಾಯಾಧೀಶರು ಮಾತನಾಡಿದರು.

ಮಕ್ಕಳ ಅಪೌಷ್ಟಿಕತೆಗೆ ಹಲವು ಕಾರಣಗಳಿರುತ್ತವೆ. ಆದರೆ ಸರಕಾರ ಅಂಗನವಾಡಿಗಳ ಮೂಲಕ ಪೌಷ್ಟಿಕ ಆಹಾರ ವಿತರಣೆ ಮಾಡುತ್ತಿದೆ. ಹಾಗೆಯೇ ಪಡಿತರ ವ್ಯವಸ್ಥೆಯಡಿ ಆಹಾರವನ್ನು ಕಲ್ಪಿಸಲಾಗುತ್ತಿದೆ. ಇವುಗಳನ್ನು ಬಳಸಿಕೊಳ್ಳುವಂತಾಗಬೇಕು ಎಂದು ಅವರು ಹೇಳಿದರು. ತೀವ್ರ ಅಪೌಷ್ಟಿಕತೆಗೆ ತುತ್ತಾಗಿರುವ ಮಕ್ಕಳಿಗೆ ಆರೋಗ್ಯ ಸೇವೆ ಒದಗಿಸುವಂತಾಗಬೇಕು. ಜಿಲ್ಲೆಯಲ್ಲಿ ಸಂಪೂರ್ಣವಾಗಿ ಅಪೌಷ್ಠಿಕತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಸರಕಾರದ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸಲು ಶ್ರಮಿಸಬೇಕು ಎಂದು ನ್ಯಾಯಾಧೀಶರು ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ಮಾತನಾಡಿ, ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಅಪೌಷ್ಟಿಕತೆ ಸಂಪೂರ್ಣವಾಗಿ ನಿವಾರಣೆ ಯಾಗಬೇಕಿದೆ ಎಂದರು.

ಅಪೌಷ್ಟಿಕತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಆರೋಗ್ಯ, ಶಿಕ್ಷಣ ಮತ್ತು ಮಾರ್ಗದರ್ಶನದ ಜಾಗೃತಿ ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡುವಲ್ಲಿ ಸಾಮಾಜಿಕ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಅವರು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್.ಶ್ರೀರಂಗಪ್ಪ ಅವರು ಮಾತನಾಡಿ, ಜಿಲ್ಲೆಯಲ್ಲಿ 5 ವರ್ಷದೊಳಗಿನ 153 ಮಕ್ಕಳು ಅಪೌಷ್ಟಿಕತೆಗೆ ತುತ್ತಾಗಿದ್ದು, ಇವರಿಗೆ ಹೆಚ್ಚಿನ ಪೌಷ್ಟಿಕಾಂಶ ದೊರೆಯುವಂತಾಗಲು ಾಳಜಿ ವಹಿಸಬೇಕಿದೆ. ಆ ದಿಸೆಯಲ್ಲಿ ಪೌಷ್ಟಿಕ ಆಹಾರ ವನ್ನು ನೀಡುವ ಮೂಲಕ ಅಪೌಷ್ಟಿಕತೆ ನಿವಾರಣೆಗೆ ಮುಂದಾಗಬೇಕು ಎಂದರು.

ಆರ್‌ಸಿಎಚ್ ಅಧಿಕಾರಿ ಡಾ.ದೇವಿಆನಂದ್ ಮಾತನಾಡಿ, ಅಪೌಷ್ಟಿಕತೆ ದೇಶದ ಅಭಿವೃದ್ಧಿಗೆ ಮಾರಕವಾಗಿದ್ದು, ಮಕ್ಕಳಿಗೆ ಕಡ್ಡಾಯವಾಗಿ ಪೌಷ್ಟಿ

ಕ ಆಹಾರ ಒದಗಿಸಲು ಮುಂದಾಗಬೇಕು. ಸಮತೋಲನ ಆಹಾರ ಅತೀ ಮುಖ್ಯ ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಾಗರಾಜು ಅವರು ಮಾತನಾಡಿದರು. ಇದೇ ಸಂದಭರ್ದಲ್ಲಿ ಅಂಗನವಾಡಿ ಮಕ್ಕಳಿಗೆ ಕೆನೆ ಸಹಿತ ಹಾಲಿನಪುಡಿಯ ಪೊಟ್ಟಣ ವಿತರಿಸಲಾಯಿತು. ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News