ಶ್ರೇಷ್ಠ ಲೇಖಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2016-09-01 18:26 GMT

ಬೆಂಗಳೂರು, ಸೆ. 1: ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾದ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಶ್ರೇಷ್ಠ ಲೇಖಕ ಪ್ರಶಸ್ತಿಗೆ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ಲೇಖಕರಿಗೆ 25 ಸಾವಿರ ರೂ. ಪ್ರಶಸ್ತಿ ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು. ಅರ್ಹ ಲೇಖಕರು ನಿಗದಿತ ಅರ್ಜಿ ನಮೂನೆ ಜತೆಗೆ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪ್ರಕಟಗೊಂಡ ಪುಸ್ತಕದ 4ಪ್ರತಿಗಳನ್ನು 2017ರ ಜ.5ರೊಳಗೆ ಸಲ್ಲಿಸಲು ಕೋರಿದೆ.
ಸಂಪರ್ಕಕ್ಕೆ ಸದಸ್ಯ ಕಾರ್ಯದರ್ಶಿ, ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿ, ವಿಜ್ಞಾನ ಭವನ, 24/2, 21ನೆ ಮುಖ್ಯರಸ್ತೆ, ಬಿಡಿಎ ಕಾಂಪ್ಲೆಕ್ಸ್ ಹತ್ತಿರ, ಬನಶಂಕರಿ 2ನೆ ಹಂತ, ಬೆಂಗಳೂರು-560070 ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಅಕಾಡಮಿಯ ವೆಬ್‌ಸೈಟ್ ಡಿಡಿಡಿ.ಠಿಚ್ಚಛಿಞ.ಟ್ಟಜ ಅಥವಾ ದೂ.ಸಂಖ್ಯೆ 080-2671 1160ನ್ನು ಸಂಪರ್ಕಿಸಬಹುದು ಎಂದು ಅಕಾಡಮಿ ಸದಸ್ಯ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News