ಕಾಸರಗೋಡು: ಅಖಿಲ ಭಾರತ ಬಂದ್‌ಗೆ ವ್ಯಾಪಕ ಬೆಂಬಲ

Update: 2016-09-02 04:27 GMT

ಕಾಸರಗೋಡು, ಸೆ.2: ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಅಖಿಲ ಭಾರತ ಮುಷ್ಕರ ಜಿಲ್ಲೆಯಲ್ಲಿ ಯಶಸ್ವಿಯಾಗಿದೆ.

ಖಾಸಗಿ ಮತ್ತು ಕೆಎಸ್ಸಾರ್ಟಿಸಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ದ್ವಿಚಕ್ರ ವಾಹನಗಳು ಸೇರಿದಂತೆ ಕೆಲವೇ ಕೆಲವು ಖಾಸಗಿ ವಾಹನಗಳು ಸಂಚಾರ ನಡೆಸುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಖಾಸಗಿ ವಾಹನಗಳು ಎಂದಿನಂತೆ ಸಂಚರಿಸುತ್ತಿದೆ. ಬಹುತೇಕ ಶಾಲೆಗಳಿಗೆ ರಜೆ ನೀಡಲಾಗಿದೆ. ಕಾರ್ಯಾಚರಿಸುತ್ತಿರುವ ಬೆರಳಣಿಕೆಯಷ್ಟು ಶಾಲೆಗಳಲ್ಲಿ ಮಕ್ಕಳ ಕೊರತೆ ಕಂಡು ಬರುತ್ತಿದೆ. ಬಿಎಂಎಸ್ ಹೊರತು ಪಡಿಸಿ ಉಳಿದೆಲ್ಲಾ ಕಾರ್ಮಿಕ ಸಂಘಟನೆಗಳು ಮುಷ್ಕರದಲ್ಲಿ ಪಾಲ್ಗೊಂಡಿವೆ.

ಪೂರ್ವಾಹ್ನ 11:30 ಕ್ಕೆ ಕಾರ್ಮಿಕ ಸಂಘಟನೆಗಳು ಕಾಸರಗೋಡು ನಗರದಲ್ಲಿ ಮೆರವಣಿಗೆ ನಡೆಯಲಿದೆ. ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News