ಕಲಬುರಗಿ: ಧರಣಿ ನಿರತನಿಗೆ ಗಾಯ

Update: 2016-09-02 05:01 GMT

ಕಲಬುರಗಿ, ಸೆ.2: ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ ವೇಳೆ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಟೈರ್‌ಗೆ ಬೆಂಕಿ ಹಚ್ಚುತ್ತಿದ್ದಾಗ ಧರಣಿ ನಿರತನಿಗೆ ಗಾಯವಾಗಿರುವ ಘಟನೆ ನಡೆದಿದೆ.

ಬಸವರಾಜ್ ಎಂಬಾತನಿಗೆ ತಲೆ ಹಾಗೂ ಭುಜಕ್ಕೆ ಸುಟ್ಟಿದ ಗಾಯವಾಗಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಯಾವುದೇ ಸರಕಾರಿ ಬಸ್‌ಗಳು ರಸ್ತೆಗಿಳಿಯಲಿಲ್ಲ. ಆದರೆ, ಚಿತ್ರಮಂದಿರಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದು, ಶುಕ್ರವಾರ ಕನ್ನಡದ 8 ಚಿತ್ರಗಳು ಬಿಡುಗಡೆಯಾಗಿವೆ.

ಹುಬ್ಬಳ್ಳಿ ನಗರದಲ್ಲಿ ಕೆಲವು ಆಟೋ ರಿಕ್ಷಾ ಚಾಲಕರು ಪ್ರಯಾಣಿಕರಿಂದ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಬಗ್ಗೆ ವರದಿಯಾಗಿದೆ.

ರೈಲ್ವೆ ಹಾಗೂ ಇತರ ಕೇಂದ್ರ ಸರಕಾರಿ ಉದ್ಯೋಗಿಗಳು ಬಂದ್‌ನಿಂದ ದೂರ

7ನೆ ವೇತನ ಆಯೋಗದ ಪ್ರಕಾರ ತಿಂಗಳಿಗೆ ಕನಿಷ್ಠ 18,000 ರಿಂದ 26,000 ವೇತನ ಹೆಚ್ಚಿಸಬೇಕೆಂಬ ಕೇಂದ್ರ ಸರಕಾರಿ ನೌಕರರ ಬೇಡಿಕೆಗೆ ಸ್ಪಂದನೆ ನೀಡಿರುವ ಕೇಂದ್ರ ಸರಕಾರ ಈಗಾಗಲೇ ಸಮಿತಿಯೊಂದರನ್ನು ರಚಿಸಿರುವ ಕಾರಣ ಕೇಂದ್ರ ಸರಕಾರಿ ನೌಕರರು ಶುಕ್ರವಾರ ನಡೆದಿರುವ ಭಾರತ ಬಂದ್‌ನಲ್ಲಿ ಭಾಗವಹಿಸಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News