ಬುದ್ಧಿವಂತರ ಜಿಲ್ಲೆಯ ವಿದ್ಯಾರ್ಥಿಗಳು ‘ಕ್ಯಾರಿ ಓವರ್’ ಕೇಳುತ್ತಿರುವುದು ಆಶ್ಚರ್ಯಕರ: ಸಚಿವ ಬಸವರಾಜ ರಾಯರೆಡ್ಡಿ

Update: 2016-09-02 05:40 GMT

ಮಂಗಳೂರು, ಸೆ.2: ಬುದ್ಧಿವಂತರ ಜಿಲ್ಲೆ ಎಂದು ಪ್ರಖ್ಯಾತಿ ಪಡೆದಿರುವ ಜಿಲ್ಲೆಯ ವಿದ್ಯಾರ್ಥಿಗಳು ‘ಕ್ಯಾರಿ ಓವರ್’ ಬೇಕೆಂದು ಕೇಳುತ್ತಿರುವುದು ಆಶ್ಚರ್ಯಕರ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಅವರು ನಗರದ ರಾಮಕೃಷ್ಣ ಮಠದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭ, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ‘ಕ್ಯಾರಿ ಓವರ್’ ನೀಡುವಂತೆ ಮತ್ತು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ವಕಾಲೇಜು ವಿದ್ಯಾರ್ಥಿ ಸಂಘದ ಸದಸ್ಯರು ನೀಡಿದ ಮನವಿಯನ್ನು ಸ್ವೀಕರಿಸಿ ಪ್ರತಿಕ್ರಿಯಿಸಿದರು.

ಕ್ಯಾರಿ ಓವರ್ ಕುರಿತು ಸುಪ್ರೀಂಕೋರ್ಟ್‌ನ ಆದೇಶದಿಂದ ಸಮಸ್ಯೆಯಾಗಿದೆ. ಆದರೆ ಬುದ್ಧಿವಂತರ ಜಿಲ್ಲೆಯ ವಿದ್ಯಾರ್ಥಿಗಳು ಕ್ಯಾರಿಓವರ್ ಬೇಕೆಂದು ಕೇಳುತ್ತಿರುವುದು ಆಶ್ಚರ್ಯಕರ ಎಂದು ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರ ಶೌಚಾಲಯವೊಂದರಲ್ಲಿ ಮೊಬೈಲ್ ಕ್ಯಾಮರಾ ಪತ್ತೆಯಾದ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಇದೊಂದು ಸೂಕ್ಷ್ಮ ವಿಚಾರ. ಇದರ ಬಗ್ಗೆ ತನಿಖೆ ನಡೆಯಬೇಕು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News