ಜಿಲ್ಲಾ ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನಾ ಪ್ರದರ್ಶನ

Update: 2016-09-02 05:58 GMT

ಮಂಗಳೂರು, ಸೆ.2: ಕೇಂದ್ರದ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಅಖಿಲ ಭಾರತ ಮುಷ್ಕರದ ಹಿನ್ನೆಲೆಯಲ್ಲಿ ಇಂದು ದ.ಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಿತು.

 ಈ ಸಂದರ್ಭದಲ್ಲಿ ಮಾತನಾಡಿದ ಎಐಟಿಯುಸಿ ಮುಖಂಡ ಎಚ್. ವಿ .ರಾವ್, ಕೇಂದ್ರ ಸರಕಾರ ಜಾರಿಗೆ ತರುತ್ತಿರುವ ರಸ್ತೆ ಸುರಕ್ಷತಾ ಮಸೂದೆ ವಾಹನ ಚಾಲಕರಿಗೆ ಮಾತ್ರವಲ್ಲ ಪ್ರಯಾಣಿಕರಿಗೂ ಸಮಸ್ಯೆ ಸೃಷ್ಟಿಸಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಐಬಿಇ ಮುಖಂಡ ಪಿ.ಆರ್ ಕಾರಂತ, ಮೋದಿ ಸರಕಾರದ ಕಾರ್ಮಿಕ ನೀತಿಯನ್ನು ವಿರೋಧಿಸಿ ಕಾರ್ಮಿಕರು ಹಿಂದಿನ ಯುಪಿಎ ಸರಕಾರಕ್ಕೆ ಕಲಿಸಿದ ಪಾಠವನ್ನು ಕಲಿಸಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಕೇಂದ್ರ ಸರಕಾರ ಭರವಸೆಗಳನ್ನು ಕೊಟ್ಟು ಅಧಿಕಾರಕ್ಕೆ ಬಂದು ಇದೀಗ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರುಗಳಾದ ಇಂಟಕ್ ಮುಖಂಡ ಸದಾಶಿವ ಶೆಟ್ಟಿ, ರಾಘವ, ವಸಂತ ಆಚಾರಿ, ಸುನಿಲ್ ಬಜಾಲ್, ಯೋಗೀಶ್ ಜೆಪ್ಪಿನಮೊಗರು, ವಿ.ಕುಕ್ಯಾನ್, ಕರುಣಾಕರ ಮಾರಿಪಳ್ಳ, ಸಂತೋಷ್ ಬಜಾಲ್ ಮೊದಲಾದವರು ನೇತೃತ್ವ ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News