ಜಾಗತಿಕ ವಯಸ್ಕರ ತಂಬಾಕು ಸಮೀಕ್ಷೆಪ್ರಾರಂಭ
ಬೆಂಗಳೂರು, ಸೆ.2: ಎರಡನೇ ಹಂತದ ಜಾಗತಿಕ ವಯಸ್ಕರ ತಂಬಾಕು ಸಮೀಕ್ಷೆಯನ್ನು (ಎಅಖ 2016) ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಇಂದಿನಿಂದ(ಸೆ.2) ಕರ್ನಾಟಕದಲ್ಲಿ ಪ್ರಾರಂಭಿಸಿದೆ.
ತಂಬಾಕು ಸೇವಿಸುವವರ ಸಂಖ್ಯೆಯನ್ನು ಪತ್ತೆ ಹಚ್ಚುವ ಸಲುವಾಗಿ ಹಾಗೂ ಜನರು ಎಷ್ಟರ ಮಟ್ಟಿಗೆ ತಂಬಾಕನ್ನು ಉಪಯೋಗಿಸುತ್ತಾರೆ, ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಹಾಗೂ ತಂಬಾಕು ನಿಯಂತ್ರಣ ಕಾನೂನುಗಳ ಬಗ್ಗೆ ಸಾಮಾನ್ಯ ಜನರಲ್ಲಿರುವ ತಿಳುವಳಿಕೆ ಮತ್ತು ತಂಬಾಕಿನ ನಿಯಂತ್ರಣ ಹೆಚ್ಚಿಸುವುದರ ಜೊತೆಗೆ ಸರಿಪಡಿಸುವ ಕ್ರಮಗಳ ಬಗ್ಗೆ ಅಧ್ಯಯನ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
2009-10ರ ಒಂದನೇ ಹಂತದ ಜಾಗತಿಕ ವಯಸ್ಕರ ತಂಬಾಕು ಸಮೀಕ್ಷೆಯಲ್ಲಿ ರಾಷ್ಟ್ರ ಮತ್ತು ರಾಜ್ಯಗಳಲ್ಲಿ ತಂಬಾಕು ಉಪಯೋಗಿಸುವ ಲಭ್ಯತೆಯ ಮಾಹಿತಿ ಆಧಾರದ ಮೇಲೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ತಂಬಾಕು ಸೇವನೆಯನ್ನು ತಡೆಯಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೀಗ ನಡೆಸುತ್ತಿರುವ ಸಮೀಕ್ಷೆಯಿಂದ ಲಭ್ಯವಾಗುವ ಅಂಕಿಅಂಶಗಳು ದೇಶ ಮತ್ತು ರಾಜ್ಯಗಳಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಕಾಯ್ದೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಮಾಡಲು ನೆರವಾಗಲಿದೆ ಎಂದು ನಿಯಂತ್ರಣ ಘಟಕದ ಜಂಟಿ ನಿರ್ದೇಶಕರು ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.