ಗಾಂಜಾ ಸಾಗಾಟ: ಓರ್ವ ಸೆರೆ
Update: 2016-09-02 23:57 IST
ಮಂಗಳೂರು, ಸೆ.2: ಕದ್ರಿ ಪಾರ್ಕ್ ಬಳಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದುದನ್ನ್ನು ಶುಕ್ರವಾರ ಮುಂಜಾನೆ ಅಬಕಾರಿ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿ ಬಲ್ಮಠ ನಿವಾಸಿ ಮುಹಮ್ಮದ್ ಎಂಬಾತನನ್ನು ಬಂಧಿಸಿದ್ದಾರೆ.
ಈತನಿಂದ 950 ಗ್ರಾಂ ಗಾಂಜಾ ಮತ್ತು ಗಾಂಜಾ ಸಾಗಾಟಕ್ಕೆ ಬಳಸಿದ್ದ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.