×
Ad

ಹಿಂದೂ ದೇವರ ನಿಂದನೆ: ಪೊಲೀಸರಿಗೆ ದೂರು

Update: 2016-09-03 18:13 IST

ಮೂಡುಬಿದಿರೆ,ಸೆ.3: ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ದೇವರನ್ನು ಅಶ್ಲೀಲವಾಗಿ ಬಿಂಬಿಸಿರುವುದರ ವಿರುದ್ಧ ಮೂಡುಬಿದಿರೆ ಕ್ಷೇತ್ರ ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾದಿಂದ ಮೂಡುಬಿದಿರೆ ಪೊಲೀಸರಿಗೆ ದೂರು ಸಲ್ಲಿಸಲಾಯಿತು. ಮೂಡುಬಿದಿರೆ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮೂಡುಬಿದಿರೆ ಕ್ಷೇತ್ರ ಬಿಜೆಪಿ ಅಧ್ಯಕ್ಷ ಈಶ್ವರ ಕಟೀಲು, ಪ್ರಧಾನ ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಪುರಸಭಾ ಸದಸ್ಯ ಬಾಹುಬಲಿ ಪ್ರಸಾದ್, ನಾಗರಾಜ ಪೂಜಾರಿ, ಲಕ್ಷ್ಮಣ್ ಪೂಜಾರಿ, ಪ್ರಸಾದ್ ಕುಮಾರ್,ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ, ವಿನೋದ್ ಸಾಲ್ಯಾನ್, ಮೂಡುಬಿದಿರೆ ಕ್ಷೇತ್ರ ಮೋರ್ಚಾದ ಅಧ್ಯಕ್ಷ, ಗೋಪಾಲ ಶೆಟ್ಟಿಗಾರ, ಪ್ರಧಾನ ಕಾರ್ಯದರ್ಶಿ ಉಮೇಶ್, ಕ್ಷೇತ್ರ ಯುವಮೋರ್ಚಾದ ಅಧ್ಯಕ್ಷ ಅಭಿಲಾಷ್ ಶೆಟ್ಟಿ, ಎಸ್‌ಟಿ ಮೋರ್ಚಾದ ಅಧ್ಯಕ್ಷ ಕಿಶೋರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News