‘ಮತಕ್ಕಾಗಿ ಲಂಚ’ಪ್ರಕರಣ : ಸಿಬಿಐ ತನಿಖೆ ಕೋರಿ ಕೇಂದ್ರ ಚುನಾವಣಾ ಆಯೋಗ ಪತ್ರ ?

Update: 2016-09-04 14:14 GMT

ಬೆಂಗಳೂರು, ಸೆ.4: ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿ ನಡೆದಿದ್ದ ‘ಮತಕ್ಕಾಗಿ ಲಂಚ’ ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸಿ ಮೂರು ತಿಂಗಳೊಳಗೆ ವರದಿ ನೀಡುವಂತೆ ಕೇಂದ್ರ ಚುನಾವಣಾ ಆಯೋಗವು ಕೇಂದ್ರ ಸರಕಾರಕ್ಕೆ ಪತ್ರ ಬರೆದಿರುವುದಾಗಿ ತಿಳಿದು ಬಂದಿದೆ.

ಕರ್ನಾಟಕ ಜಾರ್ಖಂಡ್ ಹಾಗೂ ಹರಿಯಾಣ ರಾಜ್ಯಗಳಲ್ಲಿ ನಡೆದಿದೆ ಎನ್ನಲಾದ ‘ಮತಕ್ಕಾಗಿ ಲಂಚ’ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಚುನಾವಣೆಯಲ್ಲಿ ನಡೆಯುತ್ತಿರುವ ಭ್ರಷ್ಟಚಾರವನ್ನು ಹತ್ತಿಕ್ಕಲು ಪ್ರತಿ ರಾಜ್ಯದಲ್ಲೂ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಕಚೇರಿಗಳನ್ನು ತೆರೆಯುವಂತೆ ಮುಖ್ಯ ಚುನಾವಣಾ ಆಯುಕ್ತ ಡಾ.ನಸೀಮ್‌ಝೈದಿ ಪತ್ರಬರೆದಿದ್ದಾರೆ ಎನ್ನಲಾಗಿದೆ.

  ಕುಟುಕು ಕಾರ್ಯಾಚರಣೆಯ ಮೂಲಕ ಈ ಪ್ರಕರಣವನ್ನು ಬಯಲಿಗೆಳೆದಿರುವ ಮಾಧ್ಯಮಗಳ ವರದಿಯನ್ನು ಸಾಕ್ಷಿಯನ್ನಾಗಿ ಪರಿಗಣಿಸಬೇಕು. ಸಿಬಿಐ ಮೂರು ತಿಂಗಳೊಳಗೆ ತನಿಖಾ ವರದಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಎಂದು ಡಾ.ನಸೀಮ್ ಝೈದಿ ಪತ್ರದಲ್ಲಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯದ ಆಳಂದ ಕ್ಷೇತ್ರದ ಕೆಜೆಪಿ ಶಾಸಕ ಬಿ.ಆರ್.ಪಾಟೀಲ್, ಬಸವಕಲ್ಯಾಣ ಕ್ಷೇತ್ರದ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ, ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ಆರ್.ವರ್ತೂರು ಪ್ರಕಾಶ್, ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಮಾಧ್ಯಮಗಳ ಕುಟುಕು ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿರುವ ಅಂಶವನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News