×
Ad

ರಸ್ತೆ ಕಾಮಗಾರಿಗೆ ಶಾಸಕರಿಂದ ಶಿಲಾನ್ಯಾಸ

Update: 2016-09-04 22:01 IST

 ಮಡಿಕೇರಿ, ಸೆ.4: ಕೊನೆಗೂ ಕೊಡಗರಹಳ್ಳಿ-ಕಂಬಿಬಾಣೆ-ಚಿಕ್ಲಿಹೊಳೆ ರಸ್ತೆ ಕಾಮಗಾರಿಗೆ ಚಾಲನೆ ದೊರೆತಿದೆ. ಕಳೆದ ಅನೇಕ ವರ್ಷಗಳಿಂದ ತೀರಾ ಹದಗೆಟ್ಟಿದ್ದ ರಸ್ತೆಯಲ್ಲಿ ವಾಹನಗಳ ಸಂಚಾರ ಮತ್ತು ಪಾದಾಚಾರಿಗಳ ಓಡಾಟಕ್ಕೆ ಅಡಚಣೆಯಾಗಿತ್ತು. ಗ್ರಾಮಸ್ಥರ ತೀವ್ರ ಒತ್ತಾಯದ ಹಿನ್ನೆಲೆಯಲ್ಲಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಶಿಲಾನ್ಯಾಸ ನೆರವೇರಿಸುವ ಮೂಲಕ ಕಾಮಗಾರಿಗೆ ಹಸಿರು ನಿಶಾನೆ ತೋರಿದರು.

ನಂತರ ಮಾತನಾಡಿದ ಅವರು, ಕೊಡಗರ ಹಳ್ಳಿ, ಚಿಕ್ಲಿಹೊಳೆ ರಸ್ತೆ ಡಾಮರೀಕರಣ ಕೆಲವು ವರ್ಷಗಳ ಹಿಂದೆ ಮಾಡಲಾಗಿದ್ದು, ಆನಂತರ ಗುಣಮಟ್ಟವಿಲ್ಲದೆ, ಚರಂಡಿ ವ್ಯವಸ್ಥೆ ಕಲ್ಪಿಸದೆ ರಸ್ತೆ ಕಳಪೆಯಾಗಿತ್ತು. ಕಳಪೆ ಕಾಮಗಾರಿ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರಿಂದ ಕಾವೇರಿ ನೀರಾವರಿ ನಿಗಮದವರು ರಸ್ತೆ ದುರಸ್ತಿಗೆ ಮೀನ ಮೇಷ ಎಣಿಸಿದ್ದರು. ಆದರೆ ಇದೀಗ ನಿಗಮದ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ ಕಾಂಕ್ರಿಟ್ ರಸ್ತೆಗೆ 2 ಕೋಟಿ ರೂ. ಬಿಡುಗಡೆಯಾಗಿದೆ. 3.5 ಮೀಟರ್ ಅಗಲದ ರಸ್ತೆ ನಿರ್ಮಾಣವಾಗಲಿದ್ದು, ಈ ಭಾಗದ ಗ್ರಾಮಸ್ಥರು ಜಾಗವನ್ನು ಬಿಟ್ಟುಕೊಡುವುದರ ಮೂಲಕ 2 ಕಡೆ ಚರಂಡಿ ಕಾಮಗಾರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.

ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಪಂಚಾಯತ್ ಅಧ್ಯಕ್ಷರು, ಗ್ರಾಮಸ್ಥರು, ಜನಪ್ರತಿನಿಧಿಗಳು ಕೈಜೋಡಿಸುವುದರೊಂದಿಗೆ ಅಭಿವೃದ್ಧಿಯತ್ತ ಗಮನಹರಿಸಬೇಕೆಂದರು.

 ಈ ಸಂದರ್ಭದಲ್ಲಿ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ, ತಾಪಂ ಉಪಾಧ್ಯಕ್ಷ ಅಭಿಮನ್ಯು ಕುಮಾರ್, ತಾಪಂ ಸದಸ್ಯರಾದ ಬಲ್ಲಾರಂಡ ಮಣಿ ಉತ್ತಪ್ಪ, ಹರದೂರು ತಾಪಂ ಸದಸ್ಯೆ ಎಚ್.ಡಿ.ಮಣಿ ಕೊಡಗರಹಳ್ಳಿ ಗ್ರಾಪಂ ಅಧ್ಯಕ್ಷ ಎಚ್.ಇ.ಅಬ್ಬಾಸ್, ಮಾಜಿ ಜಿಪಂ ಸದಸ್ಯ ಬಿ.ಬಿ.ಭಾರತೀಶ್, ಸುಂಟಿಕೊಪ್ಪ ವಿಎಸ್ ಎಸ್ ಎನ್ ಬ್ಯಾಂಕ್‌ನ ಅಧ್ಯಕ್ಷ ಎನ್.ಸಿ.ಪೊನ್ನಪ್ಪ, ಸೋಮವಾರಪೇಟೆ ಕ್ಷೇತ್ರ ಬಿಜೆಪಿ ಅಧ್ಯಕ್ಷ ಎಂ.ಎನ್.ಕೊಮರಪ್ಪ, ಹಿರಿಯ ಬಿಜೆಪಿ ಮುಖಂಡ ಪಿ.ಕೆ.ಶೇಷಪ್ಪ, ಚೆಟ್ಟಳ್ಳಿ ಗ್ರಾಪಂ ಸದಸ್ಯ ಕಂಠಿ ಕಾರ್ಯಪ್ಪ, ಕಂಬಿಬಾಣೆ ಮಾಜಿ ಗ್ರಾಪಂ ಅಧ್ಯಕ್ಷ ಶಶಿಕಾಂತ ರೈ, ಕುಶಾಲನಗರ ಪಪಂ ಅಧ್ಯಕ್ಷ ಚರಣ್ ಹಾಗೂ ಕೊಡಗರಹಳ್ಳಿ ಗ್ರಾಪಂ ಸದಸ್ಯರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News