ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಮಂಗಳೂರು, ಸೆ.4: ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ಪಿಯುಸಿ ವಿದ್ಯಾರ್ಥಿಗಳು ಸೆಪ್ಟಂಬರ್ 30ರೊಳಗೆ ಹಾಗೂ ಪದವಿ/ ಸ್ನಾತಕೋತ್ತರ/ ವೃತ್ತಿಪರ/ಡಿಪ್ಲೊಮಾ ಇಂಜಿನಿಯರಿಂಗ್/ವೈದ್ಯಕೀಯ ವಿದ್ಯಾರ್ಥಿಗಳು ಅಕ್ಟೋಬರ್ 31ರೊಳಗೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಸಲ್ಲಿಸುವ ವಿಧಾನ, ಸಲ್ಲಿಸಬೇಕಾದ ದಾಖಲೆಗಳ ವಿವರ, ಇತ್ಯಾದಿ ಮಾಹಿತಿಯು ಅಲ್ಪಸಂಖ್ಯಾತರ ನಿರ್ದೇಶನಾಲಯ ಕಚೇರಿಯ ವೆಬ್‌ಸೈಟ್ www.gokdom.kar.nic.in ನಲ್ಲಿ ಲಭ್ಯವಿವೆ.
ಆನ್‌ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಯ ಮೂಲಪ್ರತಿ (ಹಾರ್ಡ್ ಕಾಪಿ)ಯನ್ನು ವಿದ್ಯಾರ್ಥಿಯು ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ, ರುಜು ಪಡೆಯಬೇಕು. ಬಳಿಕ ಎಲ್ಲ ದಾಖಲೆಗಳ ಸಹಿತ ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಚೇರಿಯ ಮಾಹಿತಿ ಕೇಂದ್ರಕ್ಕೆ ಸಲ್ಲಿಸಿ ಕಡ್ಡಾಯವಾಗಿ ಸ್ವೀಕೃತಿ ಪಡೆದುಕೊಳ್ಳಬೇಕಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾ ಧಿಕಾರಿಗಳ ಪ್ರಕಟನೆ ತಿಳಿಸಿದೆ.