×
Ad

ತಮಿಳುನಾಡಿಗೆ ನೀರು ಬಿಡಲು ರಾಜ್ಯಕ್ಕೆ ಸುಪ್ರೀಂ ಹುಕುಂ ; ರೈತರಿಂದ ಆಕ್ರೋಶ

Update: 2016-09-05 14:58 IST

ಬೆಂಗಳೂರು, ಸೆ.5: ಕರ್ನಾಟಕದಿಂದ ತಮಿಳುನಾಡಿಗೆ ಹತ್ತು ದಿನಗಳ ಕಾಲ 15 ಸಾವಿರ ಕ್ಯೂಸೆಕ್‌ ನೀರನ್ನು ಪ್ರತಿದಿನ ಹರಿಸುವಂತೆ ಸುಪ್ರೀಂ ಕೋರ್ಟ್‌ ಇಂದು ಕರ್ನಾಟಕಕ್ಕೆ ನಿರ್ದೇಶನ ನೀಡಿದ ಬೆನ್ನಲ್ಲೆ ರೈತರಿಂದ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ  ರೈತರಿಂದ ಧರಣಿ, ರಸ್ತೆ ತಡೆ ಮೂಲಕ ಪ್ರತಿಭಟನೆ ಕಾಣಿಸಿಕೊಂಡಿದೆ
ಮಂಡ್ಯದಲ್ಲಿ ರೈತರು ರಸ್ತೆ ತಡೆ ನಿರ್ಮಿಸಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರೈತರು ತಡೆ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯದ  ವಿಶ್ವೇಶ್ವರಯ್ಯ ಪ್ರತಿಮೆ ಬಳಿ, ಶ್ರೀರಂಗಪಟ್ಟಣದ ಸ್ನಾನಘಟ್ಟದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಕಾವೇರಿ ನೀರು ಹಂಚಿಕೆಯ ವಿಚಾರದಲ್ಲಿ ರಾಜ್ಯಕ್ಕೆ ತೊಂದರೆಯಾಗಿದ್ದು,  ಸರಕಾರಕ್ಕೆ ಮತ್ತೆ ತಲೆನೋವು ತಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News