ನಾಳೆ ಮಂಡ್ಯ ಬಂದ್‌ಗೆ ಕಾವೇರಿ ಹಿತರಕ್ಷಣಾ ಸಮಿತಿ ಕರೆ
Update: 2016-09-05 17:15 IST
ಮಂಡ್ಯ, ಸೆ.5: ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ ನೀರು ಹರಿಸಲು ಇಂದು ರಾಜ್ಯಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ ಅಲ್ಲಲ್ಲಿ ಪ್ರತಿಭಟನೆ ಕಾಣಿಸಿಕೊಂಡಿದ್ದು, ಮಂಗಳವಾರ ಮಂಡ್ಯ ಬಂದ್‌ಗೆ ಕಾವೇರಿ ಹಿತರಕ್ಷಣಾ ಸಮಿತಿ ಕರೆ ನೀಡಿದೆ.
ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಒಟ್ಟು ನಾಲ್ಕು ನಿರ್ಣಯ ಕೈಗೊಳ್ಳಲಾಗಿದೆ. 1 ಸುಪ್ರೀಂ ಕೋರ್ಟ್‌ನ ತೀರ್ಪು ಖಂಡಿಸಿ ಮಂಗಳವಾರ ಮಂಡ್ಯ ಜಿಲ್ಲಾ ಬಂದ್ ನಿರ್ಧಾರ ,2.ಆದೇಶ ಮರು ಪರಿಶೀಲನೆಗೆ ಸುಪ್ರೀಂಕೋರ್ಟ್‌ಗೆ ಸರಕಾರ ತಕ್ಷಣ ಅರ್ಜಿ ಸಲ್ಲಿಸಬೇಕು. 3.ರೈತರಿಂದಲೂ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಬೇಕು, 4. ರಾಜ್ಯದ ಸಂಸದರು ಪ್ರಧಾನಿಗೆ ರಾಜ್ಯದ ಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂಬ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅಧ್ಯಕ್ಷ ಜಿ.ಮಾದೇಗೌಡ ತಿಳಿಸಿದ್ದಾರೆ.