ಎಕ್ಸಲೆಂಟ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
Update: 2016-09-05 17:24 IST
ಮೂಡುಬಿದಿರೆ,ಸೆ. 5: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಪಿಯು ಕಾಲೇಜಿನಲ್ಲಿ ಶಿಕ್ಷಣ ದಿನಾಚರಣೆ ಕಾರ್ಯಕ್ರಮ ಸೋಮವಾರ ನಡೆಯಿತು. ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಅವರ ಗುರುಗಳಾದ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ.ರಾಧಾಕೃಷ್ಣ ಹಾಗೂ ಪ್ರೊ. ಉದಯ ಕುಮಾರ್ ಮಲ್ಲ ಅವರಿಗೆ ಗುರುವಂದನೆ ಸಲ್ಲಿಸಲಾಯುತು.
ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ನಮಗೆ ವಿದ್ಯೆ ನೀಡಿದ ಶಿಕ್ಷಕರ ಜೀವನಾದರ್ಶಗಳು ನಮಗೆ ಮಾರ್ಗದರ್ಶನ ನೀಡುತ್ತವೆ ಎಂದರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್, ಪ್ರಾಂಶುಪಾಲ ಸುರೇಶ್ ಬಾಬು ವೇದಿಕೆಯಲ್ಲಿದ್ದರು.
ಕಾಲೇಜಿನ ಆಡಳಿತಾಧಿಕಾರಿ ಡಾ.ಶುೃತಕೀರ್ತಿರಾಜ್ ಪ್ರಾಸ್ತವಿಕವಾಗಿ ಮಾತನಾಡಿದರು. ಸರ್ವಪಳ್ಳಿ ರಾಧಾಕೃಷ್ಣ ಅವರನ್ನು ವಿದ್ಯಾರ್ಥಿನಿ ಪೂಜಾ ಪರಿಚಯಿಸಿದರು. ಉಪನ್ಯಾಸಕ ರಂಜಿತ್ ಜೈನ್ ಕಾರ್ಯಕ್ರಮ ನಿರೂಪಿಸಿದರು.