×
Ad

ಸೆ.9ರಂದು ಕರ್ನಾಟಕ ಬಂದ್‌ಗೆ ಕನ್ನಡ ಒಕ್ಕೂಟ ಕರೆ

Update: 2016-09-05 19:36 IST

ಬೆಂಗಳೂರು. ಸೆ.5: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ವಿರೋಧಿಸಿ ಕನ್ನಡ ಒಕ್ಕೂಟ ಸೆಪ್ಟಂಬರ್‌ 9 ರಂದು ಕರ್ನಾಟಕ ಬಂದ್‌ಗೆ  ಕರೆ ನೀಡಿದೆ.
ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್ ನಾಗರಾಜ್‌   "ಪದೇ ಪದೇ ಬಂದ್‌ ಮಾಡುವ ಹುಚ್ಚು ನನಗಿಲ್ಲ . ಬಂದ್‌ನಿಂದ  ಜನರಿಗೆ ತೊಂದರೆಯಾಗುತ್ತದೆ. ಆದರೆ ಕಾವೇರಿ ವಿಚಾರದಲ್ಲಿ ಕರ್ನಾಟಕ ಬಂದ್‌ ಅನಿವಾರ್ಯವಾಗಿದೆ. ನಾವು ಜೈಲಿಗೆ ಹೋಗಲು ಸಿದ್ಧ. ಆದ್ರೆ.ನೀರು ಬಿಡುವುದಿಲ್ಲ.  ಕರ್ನಾಟಕ ಬಂದ್‌ಗೆ ಎಲ್ಲರೂ ಸಹಕಾರ ನೀಡುವಂತೆ ಕೈ ಮುಗಿದು ಬೇಡಿಕೊಳ್ಳುತ್ತೇನೆ” ಎಂದು   ಹೇಳಿದ್ದಾರೆ..
ಸುಪ್ರೀಂ ಕೋರ್ಟ್‌‌ನ ಆದೇಶದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ವಿರೋಧಿಸಿ ವಾಟಾಳ್ ನಾಗರಾಜ್‌  ನೇತೃತ್ವದಲ್ಲಿ ಕನ್ನಡ ಒಕ್ಕೂಟದ  ಕಾರ್ಯಕರ್ತರು ಬೆಂಗಳೂರಿನ ರಿಚ್ಮಂಡ್‌ ರಸ್ತೆಯಲ್ಲಿ ರಸ್ತೆ ತಡೆ ನಿರ್ಮಿಸಿ ಪ್ರತಿಭಟನೆ ನಡೆಸಿದರು.  ಇದರಿಂದಾಗಿ ಟ್ರಾಫ್ ಜಾಮ್ ಆಗಿ ವಾಹನಗಳ ಸುಗಮ ಸಂಚಾರಕ್ಕೆ ಧಕ್ಕೆ ಉಂಟಾಯಿತು. ಪೊಲೀಸರು ಪ್ರತಿಭಟನೆಕಾರರನ್ನು ಬಂಧಿಸಿ ಅನಂತರ ಬಿಡುಗಡೆ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News