×
Ad

ಬಿ.ಸಿ.ರೋಡ್ ನೇತ್ರಾವತಿ ನದಿಯಲ್ಲಿ ಮುಳುಗಿ ವಳಚ್ಚಿಲ್ ಶ್ರೀನಿವಾಸ್ ಕಾಲೇಜು ವಿದ್ಯಾರ್ಥಿ ಸಾವು

Update: 2016-09-05 19:55 IST

ಬಂಟ್ವಾಳ, ಸೆ. 5: ಬಿ.ಸಿ.ರೋಡ್ ಸಮೀಪದ ಕೈಕುಂಜೆ ನೇತ್ರಾವತಿ ನದಿ ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮ್ರತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ. 

ಮೃತರನ್ನ ಮಂಗಳೂರು ನಂತೂರು ನಿವಾಸಿ, ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನ ದ್ವಿತೀಯ ಎಂಬಿಎ ವಿದ್ಯಾರ್ಥಿ ರಜನಿಕಾಂತ್(25) ಎಂದು ಗುರುತಿಸಲಾಗಿದೆ. 

ಮೃತ ವಿದ್ಯಾರ್ಥಿ ಗಣೇಶೋತ್ಸವದ ಪ್ರಯುಕ್ತ ಕಾಲೇಜಿಗೆ ರಜೆ ಇದ್ದರಿಂದ ಸ್ಥಳೀಯ ಇಬ್ಬರು ಸ್ನೇಹಿತರ ಜೊತೆ ಬಿ.ಸಿ.ರೋಡು ಸಮೀಪದ ಕೈಕುಂಜೆಯ ರೈಲ್ವೆ ಸೇತುವೆಯ ಕೆಳಗೆ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಲೆಂದು ಇಳಿದಿದ್ದರು. ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ನದಿಯಲ್ಲಿ ನೀರಿನ ಆಳ ತಿಳಿಯದೆ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 

ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾಧಿಕಾರಿ ನಂದ ಕುಮಾರ್  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತದೇಹ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News