ಮಂಡ್ಯ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇನ್ನರೆಡು ದಿನ ವಿಸ್ತರಣೆ
Update: 2016-09-06 14:34 IST
ಮಂಡ್ಯ, ಸೆ.6: ಕಾವೇರಿ ಹೋರಾಟ ಜಿಲ್ಲೆಯಲ್ಲಿ ತೀವ್ರಗೊಂಡ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇನ್ನರೆಡು ದಿನ ವಿಸ್ತರಿಸಲಾಗಿದೆ.
ಕಾವೇರಿ ಹಿತರಕ್ಷಣಾ ಸಮಿತಿ ಮಂಡ್ಯ ಜಲ್ಲಾ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದೀಗ ಬುಧವಾರ ಮತ್ತು ಗುರುವಾರ ರಜೆಯನ್ನು ವಿಸ್ತರಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಸುದ್ದಿಗಾರರೊಂದಿಗೆ ತಿಳಿಸಿದ್ದಾರೆ.