ಬಸ್‌ಗೆ ಬೊಲೆರೋ ಜೀಪ್ ಢಿಕ್ಕಿ: ಚಾಲಕ ಪಾರು

Update: 2016-09-06 13:00 GMT

ಬಂಟ್ವಾಳ, ಸೆ.6: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಪರ್ಲೋಟ್ಟು ಎಂಬಲ್ಲಿ ಬಸ್ ಮತ್ತು ಬೊಲೆರೋ ಜೀಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೊಲೆರೋ ಚಾಲಕ ಸಣ್ಣಪುಟ್ಟ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.

ದಾಮೋದರ್ ಗಾಯಗೊಂಡ ಬೊಲೆರೋ ಚಾಲಕ.

ಮಾಣಿಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬೊಲೆರೊ ಜೀಪು ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್‌ಗೆ ಢಿಕ್ಕಿ ಹೊಡೆದಿದೆ. ಅಪಘಾತದಿಂದ ಎರಡು ವಾಹನಗಳ ಮುಂಬಾಗ ಜಖಂಗೊಂಡಿದ್ದು ಬೊಲೆರೊ ಚಾಲಕ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಅಪಘಾತಕ್ಕೊಳಗಾದ ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News