ಮಹಾದಾಯಿ ಜಲ ವಿವಾದ : ಗೋವಾ-ಮಹಾರಾಷ್ಟ್ರ ಸರಕಾರಕ್ಕೆ ಸಿಎಂ ಪತ್ರ
Update: 2016-09-06 19:16 IST
ಬೆಂಗಳೂರು, ಸೆ.6: ಮಹಾದಾಯಿ ಜಲ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರಕಾರ, ಈ ವಿಚಾರದ ಕುರಿತು ಗೋವಾ ಹಾಗೂ ಮಹಾರಾಷ್ಟ್ರ ಸರಕಾರಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಮಹಾದಾಯಿ ನ್ಯಾಯಾಧೀಕರಣವು ಜಲ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ಸಲಹೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಭಯ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು, ಮಾತುಕತೆಗೆ ದಿನಾಂಕ ನಿಗದಿ ಮಾಡುವಂತೆ ಮನವಿ ಮಾಡಿದ್ದಾರೆ.