×
Ad

ಐಸಿಸಿ ಏಕದಿನ ರ್ಯಾಂಕಿಂಗ್: ದ್ವಿತೀಯ ಸ್ಥಾನ ಕಾಯ್ದುಕೊಂಡ ಕೊಹ್ಲಿ

Update: 2016-09-06 23:13 IST

ದುಬೈ, ಸೆ.6: ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಬ್ಯಾಟಿಂಗ್ ರ್ಯಾಂಕಿಂಗ್‌ನಲ್ಲಿ ಭಾರತದ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮ ಏಳನೆ ಸ್ಥಾನಕ್ಕೆ ಕುಸಿದಿದ್ದಾರೆ.

ಒಟ್ಟು 813 ಅಂಕ ಗಳಿಸಿರುವ ಕೊಹ್ಲಿ ನಂ.1 ಸ್ಥಾನದಲ್ಲಿರುವ ಎಬಿ ಡಿವಿಲಿಯರ್ಸ್‌ಗಿಂತ (887) ಕೆಲವೇ ಅಂಕಗಳಿಂದ ಹಿಂದಿದ್ದಾರೆ. ವಿಲಿಯರ್ಸ್‌ರ ಸಹ ಆಟಗಾರ ಹಾಶಿಮ್ ಅಮ್ಲ(778) 3ನೆ ಸ್ಥಾನದಲ್ಲಿದ್ದಾರೆ.

ಪಾಕಿಸ್ತಾನ ವಿರುದ್ಧ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿರುವ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಜೋ ರೂಟ್ ಮೊದಲ ಬಾರಿ ಅಗ್ರ-5ರಲ್ಲಿ ಸ್ಥಾನ ಪಡೆದಿದ್ದಾರೆ.

 ಸರಣಿಯಲ್ಲಿ ಒಟ್ಟು 274 ರನ್ ಗಳಿಸಿದ್ದ ರೂಟ್ ನ್ಯೂಝಿಲೆಂಡ್‌ನ ಕೇನ್ ವಿಲಿಯಮ್ಸನ್ ಹಾಗೂ ಮಾರ್ಟಿನ್ ಗಪ್ಟಿಲ್, ಭಾರತದ ರೋಹಿತ್ ಶರ್ಮರನ್ನು ಹಿಂದಕ್ಕೆ ತಳ್ಳಿದ್ದಾರೆ.

3ನೆ ಏಕದಿನದಲ್ಲಿ 171 ರನ್ ಸಹಿತ ಸರಣಿಯಲ್ಲಿಒಟ್ಟು 223 ರನ್ ಗಳಿಸಿದ್ದ ಇಂಗ್ಲೆಂಡ್‌ನ ಅಲೆಕ್ಸ್ ಹೇಲ್ಸ್ 4 ಸ್ಥಾನ ಭಡ್ತಿ ಪಡೆದು 20ನೆ ಸ್ಥಾನದಲ್ಲಿದ್ದಾರೆ.

ಪಾಕ್ ವಿರುದ್ಧದ ಸರಣಿಯಲ್ಲಿ ಒಟ್ಟು 8 ವಿಕೆಟ್‌ಗಳನ್ನು ಉರುಳಿಸಿರುವ ಇಂಗ್ಲೆಂಡ್‌ನ ಆದಿಲ್ ರಶೀದ್ ಮೊದಲ ಬಾರಿ ಅಗ್ರ-10ರಲ್ಲಿ ಸ್ಥಾನ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News