×
Ad

ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿ ಕರವೇ ವತಿಯಿಂದ ಪ್ರತಿಭಟನೆ

Update: 2016-09-07 11:38 IST

ಮಂಗಳೂರು, ಸೆ.7: ಕಾವೇರಿ ನದಿ ನೀರಿನ ವಿಚಾರದಲ್ಲಿ ಸುಪ್ರಿಂ ಕೋರ್ಟ್ ಅದೇಶ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ದಕ್ಷಿಣಕನ್ನಡ ಜಿಲ್ಲಾ ಘಟಕದ ವತಿಯಿಂದ ಇಂದು ದ.ಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಅನಿಲ್ ದಾಸ್, ಜಯಲಲಿತಾ ಮತರಾಜಕಾರಣಕ್ಕಾಗಿ ಕಾವೇರಿ ವಿವಾದವನ್ನು ಕೆದಕುತ್ತಿದ್ದಾರೆ. ಎಲ್ಲ ರಾಜಕೀಯ ಪಕ್ಷಗಳು ಮತರಾಜಕಾರಣದಲ್ಲಿ ನಿರತವಾಗಿದೆ. ವೈಜ್ಞಾನಿಕ ಅಧ್ಯಯನ ಕೈಗೊಂಡು ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.

ಪ್ರತಿಭಟನೆಯಲ್ಲಿ ಅನ್ವರ್ ರೀಕೋ, ಪ್ರವೀಣ್ ಶೆಟ್ಟಿ, ನಝೀರ್ ಬೆಂಗ್ರೆ, ಮಧುಸೂದನ್, ಜಲೀಲ್, ಉಸ್ಮಾನ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News