ಕಾವೇರಿ ನೀರು ಹರಿಸಿದ್ದಕ್ಕೆ ಮಂಡ್ಯ ಸೇರಿದಂತೆ ರಾಜ್ಯದ ಹಲವೆಡೆ ಆಕ್ರೋಶ
Update: 2016-09-07 13:25 IST
ಮಂಡ್ಯ, ಸೆ.7: ಸುಪ್ರೀಂಕೋರ್ಟಿನ ಆದೇಶಕ್ಕೆ ತಲೆಗಾಗಿ ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯಸರಕಾರದ ನಿರ್ಧಾರವನ್ನು ವಿರೋಧಿಸಿ ಬುಧವಾರ ಮಂಡ್ಯ ಸೇರಿದಂತೆ ರಾಜ್ಯದ ಹಲವೆಡೆ ರೈತರು ತೀವ್ರ ಪ್ರತಿಭಟನೆ ನಡೆಸಿದರು.
ಮಂಡ್ಯದಲ್ಲಿ ಬಲವಂತವಾಗಿ ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಿಸಿದ ಪ್ರತಿಭಟನಾಕಾರರು ಅಂಗಡಿಗಳಲ್ಲಿದ್ದ ಸಾಮಾನುಗಳನ್ನು ಬೀದಿಗೆ ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಸಿನಿಮಾ ಥಿಯೇಟರ್‌ಗಳಿಗೆ ನುಗ್ಗಿ ದಾಂಧಲೆ ನಡೆಸಿದರು.
ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದರು. ಪರಿಸ್ಥಿತಿಯನ್ನು ನಿಭಾಯಿಸಲು ಯಶಸ್ವಿಯಾದರು.
ಗಣೇಶ ಮೂರ್ತಿ ವಿಸರ್ಜನೆಗೂ ನೀರಿಲ್ಲ. ಕಾವೇರಿ ನೀರನ್ನು ಬಿಟ್ಟಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಧರಣಿನಿರತರು ಗಣೇಶ ವಿಗ್ರಹವನ್ನು ಹೊತ್ತುಕೊಂಡು ಮೆರವಣಿಗೆ ನಡೆಸಿದರು.