×
Ad

ಭಟ್ಕಳ: ಜಾನುವಾರು ಸಾಗಾಟಗಾರರ ಮೇಲೆ ಹಲ್ಲೆ

Update: 2016-09-07 20:20 IST

ಭಟ್ಕಳ, ಸೆ.7: ತಾಲೂಕಿನ ಬಂದರ್ ರಸ್ತೆಯಲ್ಲಿ ಜಾನುವಾರುಗಳನ್ನು ಕೊಂಡೊಯ್ಯುತ್ತಿದ್ದ ಇಬ್ಬರ ಮೇಲೆ ಬೈಕ್‌ನಲ್ಲಿ ಬಂದ ವ್ಯಕ್ತಿಗಳಿಬ್ಬರು ಹಲ್ಲೆ ಮಾಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಹಲ್ಲೆಗೈದ ಯುವಕರನ್ನು ವಶಕ್ಕೆ ತೆಗೆದುಕೊಂಡಿದ್ದಾಗಿ ತಿಳಿದುಬಂದಿದೆ.

ತಾಲೂಕಿನ ಬಂದರ್ ರಸ್ತೆಯಲ್ಲಿ ಹಾವೇರಿ ಮೂಲದ ಅಲ್ಲಾಭಕ್ಷ್ ಮತ್ತು ಹುಸೇನ್ ಸಾಬ್ ಎನ್ನುವವರು ಜಾನುವಾರುಗಳನ್ನು ಕೊಂಡೊಯ್ಯುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ಅವರ ಮೇಲೆ ಹಲ್ಲೆ ನಡೆಸಲಾರಂಭಿಸಿದ್ದರು. ಈ ಸಂದರ್ಭ ಸ್ಥಳೀಯರು ಮದ್ಯಪ್ರವೇಶಿಸಿದ್ದು, ಗಲಿಬಿಲಿಗೊಂಡ ಯುವಕರು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಈ ಸಂದರ್ಭ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು ಎನ್ನಲಾಗಿದೆ.

ವಿಷಯ ತಿಳಿದ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಹಲ್ಲೆ ಮಾಡಿದ ಯುವಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News