×
Ad

ಮುಂಬೈ ದಾಳಿಕೋರರ ವಿರುದ್ಧ ಕ್ರಮ ತೆಗೆದುಕೊಳ್ಳಿ

Update: 2016-09-07 23:54 IST

ವಾಶಿಂಗ್ಟನ್, ಸೆ. 7: ತನ್ನ ನೆರೆ ದೇಶಗಳ ಮೇಲೆ ದಾಳಿ ನಡೆಸುವ ಗುಂಪುಗಳೂ ಸೇರಿದಂತೆ ಎಲ್ಲ ಭಯೋತ್ಪಾದಕ ಗುಂಪುಗಳ ಮೇಲೆ ಪಾಕಿಸ್ತಾನ ಕ್ರಮ ತೆಗೆದುಕೊಳ್ಳಬೇಕೆಂದು ಅಮೆರಿಕ ಒತ್ತಾಯಿಸಿದೆ. ಆದಾಗ್ಯೂ, ಭಯೋತ್ಪಾದಕ ಗುಂಪುಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ವಿಫಲವಾಗಿರುವುದಕ್ಕಾಗಿ ಪಾಕಿಸ್ತಾನದ ವಿರುದ್ಧ ಆರ್ಥಿಕ ದಿಗ್ಬಂಧನಗಳನ್ನು ವಿಧಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಅದು ಹೇಳಿದೆ.

‘‘ಯಾವುದೇ ರೀತಿಯ ದಿಗ್ಬಂಧನಗಳನ್ನು ನಾವು ವಿಧಿಸುತ್ತಿಲ್ಲ’’ ಎಂದು ಮಂಗಳವಾರ ತನ್ನ ದೈನಂದಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಇಲಾಖೆಯ ಉಪ ವಕ್ತಾರ ಮಾರ್ಕ್ ಟೋನರ್ ತಿಳಿಸಿದರು. ಪಾಕಿಸ್ತಾನದ ವಿರುದ್ಧ ದಿಗ್ಬಂಧನಗಳನ್ನು ವಿಧಿಸುವ ಆಯ್ಕೆಯನ್ನು ಅಮೆರಿಕ ಈಗ ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ ಎಂಬುದಾಗಿ ವಿಶ್ವಸಂಸ್ಥೆಗೆ ಅಮೆರಿಕದ ಮಾಜಿ ರಾಯಭಾರಿ ಝಲ್ಮಯ್ ಖಲೀಲ್‌ಝಾದ್ ಇತ್ತೀಚೆಗೆ ನೀಡಿದ ಹೇಳಿಕೆ ಕುರಿತ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸುತ್ತಿದ್ದರು. ‘‘ಆ ಬಗ್ಗೆ ನಾವು ಯೋಚಿಸಿಯೇ ಇಲ್ಲ’’ ಎಂದು ಟೋನರ್ ತಿಳಿಸಿದರು. ಮುಂಬೈ ಮೇಲೆ ದಾಳಿ ನಡೆಸಿದ ಭಯೋತ್ಪಾದಕ ಗುಂಪು ಸೇರಿದಂತೆ ತನ್ನ ನೆಲದಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲ ಭಯೋತ್ಪಾದಕ ಗುಂಪುಗಳ ವಿರುದ್ಧ ಪಾಕಿಸ್ತಾನ ಕಾರ್ಯಾಚರಿಸುವ ಅಗತ್ಯವಿದೆ ಎಂಬುದನ್ನು ಅಮೆರಿಕ ಅತ್ಯಂತ ಸ್ಪಷ್ಟ ಮಾತುಗಳಲ್ಲಿ ಹೇಳಿದೆ ಎಂದು ಅವರು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News