×
Ad

ಶಿಕ್ಷಣ ವಂಚಿತರಿಗೆ ಶಿಕ್ಷಣ ನೀಡುವ ಕೆಲಸವಾಗಲಿ: ಕಸ್ತೂರಿ

Update: 2016-09-08 12:44 IST

ಮಂಗಳೂರು, ಸೆ.8: ‘ಶಿಕ್ಷಣದ ಕಾಶಿ’ಯೆಂದು ಕರೆಯಲ್ಪಡುವ ದ.ಕ. ಜಿಲ್ಲೆಯಲ್ಲಿ ಶಿಕ್ಷಣದಿಂದ ವಂಚಿತರಾದವರು ಇನ್ನೂ ಇದ್ದಾರೆ. ಬಡತನದ ಕಾರಣಕ್ಕೆ ಶಿಕ್ಷಣದಿಂದ ವಂಚಿತರಾದವರು ಸಾಕಷ್ಟು ಸಂಖ್ಯೆಯಲ್ಲಿದ್ದು, ಅವರಿಗೆ ಸೂಕ್ತ ಶಿಕ್ಷಣ ನೀಡುವ ಪ್ರಯತ್ನ ಆಗಬೇಕು ಎಂದು ದ.ಕ. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ ಹೇಳಿದರು.
 ಲೋಕ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು, ದ.ಕ. ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸಾಕ್ಷರತಾ ಸಮಿತಿ ದ.ಕ. ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ತಾಲೂಕು ಪಂಚಾಯತ್, ಮೂಡುಶೆಡ್ಡೆ ಗ್ರಾಮ ಪಂಚಾಯತ್, ಜನಶಿಕ್ಷಣ ಟ್ರಸ್ಟ್, ಅಪ್ನಾ ದೇಶ್ ಹಾಗೂ ಗ್ರಾಮ ವಿಕಾಸ ಪ್ರೇರಕರ ಸಹಭಾಗಿತ್ವದಲ್ಲಿ ಇಂದು ಮೂಡುಶೆಡ್ಡೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಡೆದ ವಿಶ್ವ ಸಾಕ್ಷರತಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕ್ಷಣ ವಂಚಿತರಾವರಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಎಲ್ಲರೂ ಶ್ರಮವಹಿಸಿ ಜಿಲ್ಲೆ ಸಂಪೂರ್ಣ ಸಾಕ್ಷರ ಜಿಲ್ಲೆಯಾಗಲು ಪ್ರಯತ್ನಿಸಬೇಕಾಗಿದೆ ಎಂದು ಅವರು ಹೇಳಿದರು.
ಇದೇ ಸಂದರ್ಭ ‘ನೀರು ಇಂಗಿಸಿ, ವೃಕ್ಷ ಬೆಳೆಸಿ’ ಸಂವಾದ ಕಾರ್ಯಕ್ರಮ ನಡೆಯಿತು.
 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡುಶೆಡ್ಡೆ ಗ್ರಾಮ ಪಂಚಾಯತ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ವಹಿಸಿದ್ದರು.
  ದ.ಕ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿಪಂ ಸದಸ್ಯ ಯು.ಪಿ.ಇಬ್ರಾಹೀಂ, ಪಿಲಿಕುಲ ವಿಜ್ಞಾನ ಕೇಂದ್ರದ ನಿರ್ದೇಶಕ ಜಯಪ್ರಕಾಶ್ ಭಂಡಾರಿ, ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಶೀನ ಶೆಟ್ಟಿ, ಶಿಕ್ಷಣಾಧಿಕಾರಿ ಪುರುಷೋತ್ತಮ ಮೊದಲಾವದವರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ನವಸಾಕ್ಷರರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಜಲಸಾಕ್ಷರತ ಅಭಿಯಾನದಲ್ಲಿ ಸಾಧನೆಗೈದವರನ್ನು ಇದೇ ಸಂದರ್ಭ ಅಭಿನಂದಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News