×
Ad

ಮುಡಿಪು: ಸೆ.9ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Update: 2016-09-08 12:52 IST

ಕೊಣಾಜೆ, ಸೆ.8: ಮುಡಿಪು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶವು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ಸೆ.9ರಂದು ಅಪರಾಹ್ನ 3:30ಕ್ಕೆ ಮುಡಿಪುವಿನ ಗೋಪಾಲಕೃಷ್ಣ ಸಭಾಭವನದಲ್ಲಿ ನಡೆಯಲಿದೆ.
ಪಕ್ಷದ ಕಾರ್ಯಕರ್ತರು, ಜನಪ್ರತಿನಿಧಿಗಳು, ಮುಂಚೂಣಿ ಘಟಕದ ಪದಾಧಿಕಾರಿಗಳು ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮುಡಿಪು ಬ್ಲಾಕ್ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News