ಶಾಲೆಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ
Update: 2016-09-11 00:18 IST
ಕಾಸರಗೋಡು, ಸೆ.10: ಶಾಲೆಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಿ ಕೇರಳ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ವಿದ್ಯಾರ್ಥಿಗಳು ಮೊಬೈಲ್ ಫೋನ್ ಬಳಸುತ್ತಿಲ್ಲ ಎಂಬುದನ್ನು ಮುಖ್ಯೋಪಾಧ್ಯಾಯರು ಖಾತರಿಪಡಿಸಬೇಕು. ಶಿಕ್ಷಕರು ತರಗತಿ ನಡೆಸುವ ಸಮಯದಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸದಂತೆ ಎಚ್ಚರಿಕೆ ವಹಿಸಬೇಕು ಎಂದು ಮುಖ್ಯೋಪಾಧ್ಯಾಯ ಮತ್ತು ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಶಾಲೆಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ ಜಾರಿಯಲ್ಲಿದ್ದರೂ ಅದು ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.