ಅವಿಭಜಿತ ದ.ಕ.ಜಿಲ್ಲೆಯಲ್ಲಿ ನಾಳೆ ಸಾರ್ವತ್ರಿಕ ರಜೆ
Update: 2016-09-11 00:21 IST
ಬೆಂಗಳೂರು, ಸೆ.10: ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ.12ರಂದು ಬಕ್ರೀದ್ ಆಚರಣೆ ನಡೆಯಲಿರುವುದರಿಂದ ಅಂದು ಎರಡು ಜಿಲ್ಲೆಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಿಸಿ ರಾಜ್ಯ ಸರಕಾರ ಆದೇಶ ನೀಡಿದೆ.
ಅಂದು ದ.ಕ. ಹಾಗೂ ಉಡುಪಿ ಜಿಲ್ಲೆಗಳ ಎಲ್ಲ ಸರಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸೆ.13ರಂದು ಈ ಜಿಲ್ಲೆಗಳಲ್ಲಿ ಸರಕಾರಿ ಕಚೇರಿಗಳು, ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಆದರೆ ರಾಜ್ಯದ ಉಳಿದ ಜಿಲ್ಲೆಗಳಿಗೆ ಸೆ.13ರಂದು ಸಾರ್ವತ್ರಿಕ ರಜೆ ನೀಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.