ಕಾಸರಗೋಡು: ಓಣಂ, ಬಕ್ರೀದ್ ಹಿನ್ನೆಲೆಯಲ್ಲಿ ಶಾಂತಿಸಭೆ

Update: 2016-09-11 10:30 GMT

ಕಾಸರಗೋಡು, ಸೆ.11: ಓಣಂ, ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರವಿವಾರ ರಾಜ್ಯ ಕಂದಾಯ ಸಚಿವ ಇ.ಚಂದ್ರಶೇಖರನ್‌ರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿಸಭೆ ನಡೆಯಿತು.

ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಶಾಂತಿ ಕದಡಲು ಹುನ್ನಾರ ನಡೆಸುವ ಸಾಧ್ಯತೆ ಇರುವುದರಿಂದ ಎಲ್ಲರೂ ಶಾಂತಿ ಕಾಪಾಡಲು ಸಹಕರಿಸಬೇಕು. ಕಾನೂನು ಉಲ್ಲಂಘಿಸಿದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುನ್ನೆಚ್ಚರಿಕೆ ನೀಡಲಾಯಿತು.

ಅಹಿತಕರ ಘಟನೆ ನಡೆಯದಂತೆ ಎಲ್ಲಾ ರಾಜಕೀಯ ಪಕ್ಷಗಳ ಸಹಕಾರ ಅಗತ್ಯ ಎಂದು ಶಾಸಕ ಎನ್.ಎ. ನೆಲ್ಲಿಕುನ್ನು ಹೇಳಿದರು.

ಜಿಲ್ಲಾಧಿಕಾರಿ ಜೀವನ್ ಬಾಬು ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಥೋಮ್ಸನ್ ಜೋಸ್, ಹೆಚ್ಚುವರಿ ದಂಡಾಧಿಕಾರಿ ಕೆ. ಅಂಬುಜಾಕ್ಷನ್, ನಗರಸಭಾ ಅಧ್ಯಕ್ಷ ಕೆ.ಪಿ. ಜಯರಾಜನ್, ಬಿಫಾತಿಮ ಇಬ್ರಾಹೀಂ , ವಿವಿಧ ರಾಜಕೀಯ ಪಕ್ಷದ ಮುಖಂಡರಾದ ಸಿ.ಎಚ್. ಕುಞಾಂಬು, ಕೆ.ಶ್ರೀಕಾಂತ್, ಗೋವಿಂದನ್, ಪಿ.ಎ. ಅಶ್ರಫಾಲಿ, ಎ.ಅಬ್ದುರ್ರಹ್ಮಾನ್, ಕರಿವೆಳ್ಳೂರು ವಿಜಯನ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News