ಹೊನ್ನಾವರ: ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು
Update: 2016-09-11 18:13 IST
ಭಟ್ಕಳ, ಸೆ.11: ಈಜಲು ತೆರಳಿದ್ದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಹೊನ್ನಾವರ ಬಳಿಯ ಅಪ್ಸರಕೊಂಡದಲ್ಲಿ ಇಂದು ಸಂಜೆ ಸಂಭವಿಸಿದೆ.
ಮೃತಪಟ್ಟ ವಿದ್ಯಾರ್ಥಿಗಳನ್ನು ಬೆಂಗಳೂರು ಆರ್.ವಿ.ಇಂಜಿನಿಯರಿಂಗ್ ಕಾಲೇಜ್‌ನ ಮೋಹನ್ (21), ತೇಜಸ್ (22) ಚೇತನ್ (22) ಎಂದು ಗುರುತಿಸಲಾಗಿದೆ.
ಕಾಲೇಜಿನ 9ಮಂದಿ ವಿದ್ಯಾರ್ಥಿಗಳ ತಂಡ ಪ್ರವಾಸಕ್ಕೆಂದು ಬಂದಿದ್ದರು. ಹೊನ್ನಾವರ ಬಳಿಯ ಅಪ್ಸರಕೊಂಡದಲ್ಲಿ ಈಜಲು ತೆರಳಿದ್ದ ಸಂದರ್ಭ ನೀರುಪಾಲಾಗಿದ್ದಾರೆ ಎಂದು ತಿಳಿದುಬಂದಿದೆ.