ಬೆಂಗಳೂರಿನ ತಮಿಳು ಪ್ರಾಬಲ್ಯದ ಪ್ರದೇಶಗಳಲ್ಲಿ ಬಿಗಿ ಭದ್ರತೆ:.ಮೇಘರಿಕ್
Update: 2016-09-12 12:27 IST
ಬೆಂಗಳೂರು, ಸೆ.12: ಬೆಂಗಳೂರು ನಗರದಲ್ಲಿ ನೆಲೆಸಿರುವ ತಮಿಳು ಜನರಿಗೆ ಬಿಗಿಭದ್ರತೆ ಒದಗಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ತಿಳಿಸಿದ್ದಾರೆ.
ತಮಿಳರ ಪ್ರಾಬಲ್ಯ ಹೆಚ್ಚಾಗಿರುವ ಶ್ರೀರಾಮಪುರಂ, ಓಕಳಿಪುರಂ, ಪ್ರಕಾಶ ನಗರ ಸೇರಿದಂತೆ ಬೆಂಗಳೂರಿನ ವಿವಿಧೆಡೆ ಭದ್ರತೆ ಹೆಚ್ಚಿಸಲಾಗಿದೆ ಎಂದು ಮೇಘರಿಕ್ ಮಾಹಿತಿ ನೀಡಿದ್ದಾರೆ.
ತಮಿಳುನಾಡಿಗೆ ಕೆಎಸ್‌ಆರ್‌ಟಿಸಿ ಬಸ್ ಸ್ಥಗಿತ:
ಚಾಮರಾಜನಗರ, ಬೆಂಗಳೂರಿನಿಂದ ತಮಿಳುನಾಡಿಗೆ ತೆರಳಬೇಕಾಗಿರುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಸ್ಥಗಿತಗೊಳಿಸಲಾಗಿದೆ.
ತಮಿಳುನಾಡಿನಲ್ಲಿ ಸೋಮವಾರ ಬೆಳಗ್ಗೆ ನಿಂತಿದ್ದ ಕರ್ನಾಟಕದ ನೋಂದಣಿಯ ಖಾಸಗಿ ಬಸ್‌ಗಳ ಗಾಜುಗಳನ್ನು ಕೆಲವು ಕಿಡಿಗೇಡಿಗಳು ದೊಣ್ಣೆಯಿಂದ ಪುಡಿ ಪುಡಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರಿ ಬಸ್‌ಗಳನ್ನು ತಮಿಳುನಾಡಿಗೆ ತೆರಳದಂತೆ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.