ಒಂದು ಹನಿ ನೀರನ್ನೂ ಬಿಡುವುದು ಬೇಡ; ಸಿಎಂ ಜೊತೆ ನಾವಿದ್ದೇವೆ: ಎಚ್.ಡಿ. ಕುಮಾರಸ್ವಾಮಿ
Update: 2016-09-12 14:47 IST
ಬೆಂಗಳೂರು, ಸೆ.12: ಸಿಎಂ ಅವರೊಂದಿಗೆ ನಾವಿದ್ದೇವೆ. ತಮಿಳುನಾಡಿಗೆ ಒಂದು ಹನಿ ನೀರನ್ನೂ ಬಿಡುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಕಾವೇರಿ ವಿಚಾರದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನೆಡೆ ಉಂಟಾದ ಕುರಿತು ಪ್ರತಿಕ್ರಿಯಿಸಿದ ಅವರು, ಒಂದು ಹನಿ ನೀರನ್ನೂ ತಮಿಳುನಾಡಿಗೆ ಬಿಡುವ ಅಗತ್ಯವಿಲ್ಲ. ಸಿಎಂ ಸಿದ್ದರಾಮಯ್ಯ ಅವರ ಜೊತೆ ನಾವಿದ್ದೇವೆ. ದಯವಿಟ್ಟು ನೀರು ಬಿಡಬೇಡಿ ಎಂದು ಮನವಿ ಮಾಡಿಕೊಂಡರು.
ಈ ವಿಚಾರದಲ್ಲಿ ಕರ್ನಾಟಕದ ಜನತೆಯನ್ನು ಕೆರಳಿಸುತ್ತಿದ್ದಾರೆ. ಹೀಗೆ ಕರ್ನಾಟಕದ ಜನರನ್ನು ಕೆರಳಿಸುವುದು ಬೇಡ. ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿ ಎಂದು ಅವರು ಆಗ್ರಹಿಸಿದರು.