ಬೆಂಗಳೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
Update: 2016-09-12 16:13 IST
ಬೆಂಗಳೂರು, ಸೆ.12: ಕಾವೇರಿ ವಿಚಾರಕ್ಕೆ ಸಂಬಂಧಿಸಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಹಿಂಸಾರೂಪ ಪಡೆಯುತ್ತಿರುವುದರಿಂದ ಎಚ್ಚೆತ್ತುಕೊಂಡಿರುವ ಪೊಲೀಸರು ನಗರದಾದ್ಯಂತ ಬಿಗಿ ಬಂದೋಬಸ್ತ್ ನಡೆಸಲು ಮುಂದಾಗಿದ್ದಾರೆ.
ಸುಮಾರು 15,000 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಶಾಂತಿ ಕಾಪಾಡುವಂತೆ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ವಿನಂತಿಸಿಕೊಳ್ಳುತ್ತಿದ್ದಾರೆ.
ಬೆಂಗಳೂರಿನ ನಗರದಾದ್ಯಂತ ಒಟ್ಟು 12 ಲಾರಿ ಹಾಗೂ ಒಂದು ಕ್ಯಾಂಟರಿಗೆ ಬೆಂಕಿ ಹಚ್ಚಲಾಗಿದೆ. ಆವಲಹಳ್ಳಿಯಲ್ಲಿ 2,ನೈಸ್ ರಸ್ತೆಯಲ್ಲಿ 4 ಲಾರಿಗೆ ಬೆಂಕಿ ಹಚ್ಚಲಾಗಿದೆ. ಮೈಸೂರು ರಸ್ತೆಯಲ್ಲಿ 6 ಲಾರಿ, 1 ಕ್ಯಾಂಟರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಕಾವೇರಿ ಗಲಾಟೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಚಿತ್ರ ಪ್ರದರ್ಶನ ರದ್ದುಪಡಿಸಲಾಗಿದೆ.