ಉಮೇಶ್ ಕುಟುಂಬಕ್ಕೆ ರಾಜ್ಯ ಸರಕಾರ 10 ಲಕ್ಷ ರೂ. ಪರಿಹಾರ ಘೋಷಣೆ
Update: 2016-09-13 11:43 IST
ಬೆಂಗಳೂರು, ಸೆ.13: ಕಾವೇರಿ ಗಲಾಟೆಯಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಸಿಂಗೋನಹಳ್ಳಿಯ ಉಮೇಶ್ ಕುಟುಂಬಕ್ಕೆ ರಾಜ್ಯ ಸರಕಾರ 10 ಲಕ್ಷ ರೂ. ಪರಿಹಾರ ನೀಡಲಿದೆ ಎಂದು ಡಾ.ಪರಮೇಶ್ವರ ತಿಳಿಸಿದರು.
ಸಿಎಂ ಗೃಹಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಗಲಭೆಯ ಸಂಬಂಧಿಸಿ 300ಕ್ಕೂ ಹೆಚ್ಚು ಮಂದಿಯ ಬಂಧನವಾಗಿದೆ, ಗಲಭೆಗೆ ಕಾರಣರಾದ ಯಾರನ್ನೂ ಬಿಡುವುದಿಲ್ಲ. ಅವರ ವಿರುದ್ಧ ಕಠಿಣ ಕ್ರಮ . ಶಾಂತಿ ಕಾಪಾಡಲು ಎಲ್ಲ ಪ್ರಯತ್ನವನ್ನು ಮಾಡಲಾಗುವುದು .
ಕೆಲಹೊತ್ತಿನಲ್ಲಿ ಸಚಿವ ಸಂಪುಟದ ಸಭೆ ನಡೆಯಲಿದ್ದು ಎಲ್ಲ ವಿಚಾರಗಳನ್ನು ಅಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪರಮೇಶ್ವರ ವಿವರಿಸಿದರು.