ಮರಳು ಸಮಸ್ಯೆ: ಸೆ.26ರಿಂದ ಉಪವಾಸ ಸತ್ಯಾಗ್ರಹ
Update: 2016-09-14 23:38 IST
ಕುಂದಾಪುರ, ಸೆ.14: ಕಳೆದ ಒಂದು ವರ್ಷದಿಂದ ಜಿಲ್ಲೆಯಲ್ಲಿ ಮರಳು ಸಮಸ್ಯೆ ಉಲ್ಬಣಗೊಂಡು ಜಿಲ್ಲೆಯ ಅಭಿವೃದ್ಧಿಗೆ ಮಾರಕವಾದರೂ ಸರಕಾರ ಈ ಕುರಿತು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಇದನ್ನು ಖಂಡಿಸಿ ಕುಂದಾಪುರ ತಾಲೂಕು ಕಟ್ಟಡಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ(ಸಿಐಟಿಯು)ವು ಸೆ.26ರಿಂದ ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿ ಕಾರಿ ಕಚೇರಿ ಎದುರು ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದೆ ಎಂದು ಸಂಘದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.