ಬೈಕ್ ಢಿಕ್ಕಿ: ವಿದ್ಯಾರ್ಥಿಗೆ ಗಾಯ
Update: 2016-09-14 23:38 IST
ಪುತ್ತೂರು, ಸೆ.14: ನಗರದ ಹೊರವಲಯದ ನೆಹರೂನಗರದಲ್ಲಿ ಮಾಣಿ ಮೈಸೂರು ಹೆದ್ದಾರಿಯಲ್ಲಿ ಬೈಕೊಂದು ಪಾದಚಾರಿ ವಿದ್ಯಾರ್ಥಿಯೊಬ್ಬನಿಗೆ ಢಿಕ್ಕಿ ಹೊಡೆದು, ಬಳಿಕ ಎದುರಿನಿಂದ ಬರುತ್ತಿದ್ದ ಓಮ್ನಿಗೆ ಢಿಕ್ಕಿ ಹೊಡೆದ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ನೆಹರೂನಗರದ ಗಣೇಶ್‌ಬಾಗ್ ನಿವಾಸಿ ತಿಮ್ಮೇಶ್ ಎಂಬವರ ಪುತ್ರ, ಪುತ್ತೂರಿನ ಕೊಂಬೆಟ್ಟು ಸರಕಾರಿ ಪ್ರೌಢ ಶಾಲೆಯ 9ನೆ ತರಗತಿಯ ವಿದ್ಯಾರ್ಥಿ ಗಣೇಶ್ ಎಂದು ಗುರುತಿಸಲಾಗಿದೆ.
ಅವರು ಅಂಗಡಿಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಪುತ್ತೂರಿನಿಂದ ಕಬಕ ಕಡೆಗೆ ತೆರಳುತ್ತಿದ್ದ ಬೈಕ್ ನೆಹರೂನಗರ ಜಂಕ್ಷನ್ ಬಳಿ ಢಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಸವಾರನ ನಿಯಂತ್ರಣ ಕಳೆದುಕೊಂಡ ಬೈಕ್ ಮಂಗಳೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಮಾರುತಿ ಓಮ್ನಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡ ಗಣೇಶ್‌ರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.