ಉಡುಪಿ: ವಾರಸುದಾರರಿಗೆ ಸೂಚನೆ
ಉಡುಪಿ, ಸೆ.14: ನಗರದ ಎಂಜಿಎಂ ರಿಕ್ಷಾ ನಿಲ್ದಾಣದ ಬಳಿ ತೀವ್ರ ಅಸ್ವಸ್ಥಗೊಂಡು ಅರೆಪ್ರಜ್ಞೆಯಲ್ಲಿದ್ದ ಸುಮಾರು 40 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿದ್ದು, ಇವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ವ್ಯಕ್ತಿ 5.7 ಅಡಿ ಎತ್ತರವಿದ್ದು, ಗೋಧಿ ಮೈಬಣ್ಣ, ಉದ್ದಮುಖ, ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಮೃತದೇಹ ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿದ್ದು ವಾರಸುದಾರರು ಯಾರಾದರೂ ಇದ್ದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.
ಉಡುಪಿ: ನಗರ ಬಸ್ ನಿಲ್ದಾಣದ ಬಳಿ ಅಸ್ವಸ್ಥಗೊಂಡು ಬಿದ್ದಿದ್ದ ಸುಮಾರು 30 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತವ್ಯಕ್ತಿ 168 ಸೆಂ.ಮೀ ಎತ್ತರವಿದ್ದು, ಗೋಧಿ ಮೈಬಣ್ಣ, ದುಂಡುಮುಖ , ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಇವರ ಮೃತದೇಹ ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರದ ಲ್ಲಿದೆ. ವಾರಸುದಾರರು ಯಾರಾದರೂ ಇದ್ದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿ ಸುವಂತೆ ಪ್ರಕಟನೆ ತಿಳಿಸಿದೆ.