ಸಮಸ್ಯೆ ಬಗೆಹರಿಸಲು ಪ್ರಧಾನಿ ಮಧ್ಯಪ್ರವೇಶಕ್ಕೆ ಕಾನೂನಿನಲ್ಲಿ ಅವಕಾಶ ಇದೆ,ಅವರಿಗೆ ಒತ್ತಡ ತನ್ನಿ
Update: 2016-09-15 13:25 IST
ಬೆಂಗಳೂರು, ಸೆ.15: ಕಾವೇರಿ ಜಲ ಹಂಚಿಕೆ ವಿವಾದಕ್ಕೆ ಸಂಬಂಧಿಸಿ ಉಂಟಾಗಿರುವ ಸಮಸ್ಯೆಯನ್ನು ಬಗೆ ಹರಿಸಲು ಪ್ರಧಾನ ಮಂತ್ರಿಗೆ ಮಧ್ಯಪ್ರವೇಶಿಸಲು ಅವಕಾಶ ಇದೆ. ಸಮಯ ಪಡೆದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಪರಿಸ್ಥಿತಿಯ ಬಗ್ಗೆ ಅವರಿಗೆ ಸಂಪೂರ್ಣ ಮಾಹಿತಿ ನೀಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ನಿವೃತ್ತ ನ್ಯಾಯಾಧೀಶರು ಸಲಹೆ ನೀಡಿದ್ದಾರೆ.
ಸಿಎಂ ಅವರ ಅಧಿಕೃತ ನಿವಾಸ ’ಕೃಷ್ಣ‘ದಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಹಿರಿಯ ಕಾನೂನು ತಜ್ಞರ ಜತೆ ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ಚರ್ಚೆ ನಡೆಸಿದರು.
ಸಮಸ್ಯೆಯ ಬಗೆಹರಿಸಲು ಪ್ರಧಾನಿಗೆ ಒತ್ತಡ ಹೇರಬೇಕು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಧಾನಿ ಬಳಿಗೆ ಸರ್ವ ಪಕ್ಷ ನಿಯೋಗವನ್ನು ಕೊಂಡೊಯ್ಯಬೇಕು. ಪ್ರಧಾನಿ ಅವರು ತಮಿಳುನಾಡು ಮುಖ್ಯ ಮಂತ್ರಿ ಜಯಲಲಿತಾ ಅವರನ್ನು ಕರೆಸಿ ಮಾತುಕತೆ ನಡೆಸುವಂತೆ ಪ್ರಧಾನಿಗೆ ಒತ್ತಡ ಹೇರುವಂತೆ ಕಾನೂನು ತಜ್ಞರು ಸಲಹೆ ನೀಡಿದರು.