ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಕರವೇಯಿಂದ ವಿನೂತನ ಪ್ರತಿಭಟನೆ

Update: 2016-09-15 16:47 GMT

ಚಿಕ್ಕಮಗಳೂರು, ಸೆ.15: ರಾಜ್ಯದಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದಲ್ಲಿ ಗುರುವಾರ ವಿನೂತನವಾಗಿ ಪ್ರತಿಭಟನೆ ನಡೆಸಿದರು.

 ವೇದಿಕೆಯ ಜಿಲ್ಲಾಧ್ಯಕ್ಷ ನೂರುಲ್ಲಾಖಾನ್ ಅವರ ನೇತೃತ್ವದಲ್ಲಿ ಕತ್ತೆ ಮತ್ತು ಖಾಲಿ ಕೊಡಗಳೊಂದಿಗೆ ತಾಲೂಕು ಕಚೇರಿ ಆವರಣದಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು ಹನುಮಂತಪ್ಪವೃತ್ತದ ಬಳಿ ಪ್ರತಿಭಟನೆ ನಡೆಸಿ ರಾಜ್ಯ, ತಮಿಳುನಾಡು ಮತ್ತು ಕೇಂದ್ರ ಸರಕಾರಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ನೂರುಲ್ಲಾಖಾನ್ ಮಾತನಾಡಿ, ರಾಜ್ಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕು. ಕೇಂದ್ರ ಸರಕಾರ ಮಧ್ಯ ಪ್ರವೇಶಿಸಿ ಕನ್ನಡಿಗರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು. ಗೌರವಾಧ್ಯಕ್ಷ ಡಿ.ಕೆ. ಕೃಷ್ಣಮೂರ್ತಿ ಮಾತನಾಡಿದರು. ನಗರಾಧ್ಯಕ್ಷ ದ್ವಾರಕೀಶ್, ನವೀನ್, ಮಂಜುನಾಥ್, ಆಶಾರಾಣಿ, ಭೂಮಿಕಾ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News